ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕೆ ಗೆಲುವು

Last Updated 5 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಕ್ವಾಲಾಲಂಪುರ (ಐಎಎನ್‌ಎಸ್): ಭಾರತ ತಂಡದವರು ಇಲ್ಲಿ ನಡೆಯುತ್ತಿರುವ 18 ವರ್ಷ ವಯಸ್ಸಿನೊಳಗಿನವರ ಏಷ್ಯಾ ಮಹಿಳೆಯರ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ ಗೆಲುವು ಸಾಧಿಸಿದ್ದಾರೆ.

ಶುಕ್ರವಾರ ನಡೆದ ಪಂದ್ಯದಲ್ಲಿ ಭಾರತ 60-59 ಪಾಯಿಂಟ್‌ಗಳಿಂದ ಮಲೇಷ್ಯಾ ತಂಡವನ್ನು ಸೋಲಿಸಿತು. ವಿಜಯೀ ತಂಡದ ಜೀನಾ ಸ್ಕಾರಿಯಾ (24 ಪಾಯಿಂಟ್ಸ್) ಉತ್ತಮ ಆಟ ಪ್ರದರ್ಶಿಸಿದರು.

ಈ ಗೆಲುವಿನ ಮೂಲಕ ಭಾರತ ತಂಡ 2014 ರ ಟೂರ್ನಿಯಲ್ಲಿ `ಲೆವೆಲ್ 1~ ವಿಭಾಗದಲ್ಲಿ ಆಡಲು ಅರ್ಹತೆ ಪಡೆಯಿತು. ಭಾರತ 2008 ರಲ್ಲಿ ಕೊನೆಯದಾಗಿ `ಲೆವೆಲ್ 1~ ರಲ್ಲಿ ಆಡಿತ್ತು. ಆ ಬಳಿ ಸತತ ಎರಡು ಟೂರ್ನಿಗಳಲ್ಲಿ `ಲೆವೆಲ್ 2~ ರಲ್ಲಿ ಆಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT