ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕೆ ಮತ್ತೊಂದು ಜಯ

Last Updated 4 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ವಡೋದರ (ಪಿಟಿಐ): ಬಾಂಗ್ಲಾದೇಶ ನೀಡಿದ್ದ ಅಲ್ಪ ಮೊತ್ತದ ಗುರಿಯನ್ನು ಸುಲಭವಾಗಿ ಮುಟ್ಟಿದ ಭಾರತ ಮಹಿಳಾ ತಂಡ ಎರಡನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಏಳು ವಿಕೆಟ್‌ಗಳ ಗೆಲುವು ಪಡೆಯಿತು. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 2-0ರಲ್ಲಿ ಸರಣಿ ಗೆಲುವಿನ ಮುನ್ನಡೆ ಸಾಧಿಸಿತು.

ರಿಲಯನ್ಸ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ಬಾಂಗ್ಲಾ ಬ್ಯಾಟಿಂಗ್ ಆರಿಸಿಕೊಂಡು 20 ಓವರ್‌ಗಳಲ್ಲಿ 4 ವಿಕೆಟ್‌ಗೆ 88 ರನ್ ಗಳಿಸಿತು. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ 18 ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು ಈ ಗುರಿ ತಲುಪಿತು. ಅನಘಾ ದೇಶಪಾಂಡೆ (28, 39ಎಸೆತ, 3ಬೌಂಡರಿ) ಹಾಗೂ ಮೋನಾ ಮೆಶ್ರಮ್ (29, 33ನಿಮಿಷ, 1 ಬೌಂಡರಿ) ಭಾರತದ ಜಯದಲ್ಲಿ ಮುಖ್ಯ ಪಾತ್ರ ವಹಿಸಿದರು.

ರಾಜಸ್ತಾನದ ಸ್ವಾಗತಿಕಾ ಆರ್. ಈ ಪಂದ್ಯವನ್ನಾಡುವ ಮೂಲಕ ಟ್ವೆಂಟಿ-20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಮೂರನೇ ಹಾಗೂ ಕೊನೆಯ ಪಂದ್ಯ ಶುಕ್ರವಾರ ನಡೆಯಲಿದೆ.

ಸಂಕ್ಷಿಪ್ತ ಸ್ಕೋರು: ಬಾಂಗ್ಲಾದೇಶ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 88 (ಶಹನಾಜ್ ಪರ್ವಿನ್ 15, ಫರ್ಜಾನಾ ಹಕೆ 23; ನಾಗರಾಜನ್ ನಿರಂಜನಾ 14ಕ್ಕೆ1, ಎಕ್ತಾ ಬಿಸ್ಟ್ 11ಕ್ಕೆ1). ಭಾರತ 18 ಓವರ್‌ಗಳಲ್ಲಿ 91ಕ್ಕೆ3. (ಅನಘಾ ದೇಶಪಾಂಡೆ 28, ಮೋನಾ ಮೆಶ್ರಮ್ 29, ಹರ್ಮನ್‌ಪ್ರೀತ್ ಕೌರ್ ಔಟಾಗದೆ 11, ಪೂನಮ್ ರಾವತ್ ಔಟಾಗದೆ 18; ಪನ್ನಾ ಘೋಷ್ 18ಕ್ಕೆ2). ಫಲಿತಾಂಶ: ಭಾರತಕ್ಕೆ 7 ವಿಕೆಟ್ ಗೆಲುವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT