ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಅಂತಃಶಕ್ತಿ: ವರದಿ ಬಿಡುಗಡೆ

Last Updated 10 ಫೆಬ್ರುವರಿ 2011, 20:15 IST
ಅಕ್ಷರ ಗಾತ್ರ

ಯಲಹಂಕ ವಾಯುನೆಲೆ: ಭಾರತೀಯ ಕೈಗಾರಿಕಾ ಒಕ್ಕೂಟ ಮತ್ತು ಕೆಪಿಎಂಜಿ ಜಂಟಿಯಾಗಿ ತಯಾರಿಸಿರುವ ‘ವೈಮಾಂತರಿಕ್ಷ ಮತ್ತು ರಕ್ಷಣಾ ಕೈಗಾರಿಕೆಯಲ್ಲಿ ಭಾರತದ ಅಂತಃಶಕ್ತಿಯ ಸ್ಫುರಣ’ ಎಂಬ ವರದಿಯನ್ನು ರಕ್ಷಣಾ ಖಾತೆಯ ರಾಜ್ಯ ಸಚಿವ ಡಾ.ಎಂ.ಎಂ. ಪಲ್ಲಂ ರಾಜು ಅವರು ಇಲ್ಲಿ ಗುರುವಾರ ಬಿಡುಗಡೆ ಮಾಡಿದರು. ಜಾಗತಿಕ ರಕ್ಷಣಾ ಮತ್ತು ವೈಮಾಂತರಿಕ್ಷ ಕ್ಷೇತ್ರದಲ್ಲಿ ಭಾರತವನ್ನು ಪ್ರಮುಖ ಪಾಲುದಾರ ರಾಷ್ಟ್ರವನ್ನಾಗಿ ಮಾಡುವುದು ಹೇಗೆ ಎಂಬ ಕುರಿತು ಈ ವರದಿ ಬೆಳಕು ಚೆಲ್ಲುತ್ತದೆ.

ಕಳೆದ ಎರಡು ವರ್ಷಗಳಲ್ಲಿ ಭಾರತ ಒಟ್ಟು 2466 ಕೋಟಿ ಡಾಲರ್ ಮೊತ್ತದ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಿದೆ ಎಂದು ವಿವರಿಸಿದೆ. ಅಲ್ಲದೆ ಇನ್ನೂ 4199 ಕೋಟಿ ಡಾಲರ್ ಮೊತ್ತದ ಒಪ್ಪಂದಗಳಿಗೆ ಭಾರತ ಸಹಿ ಹಾಕಲಿದೆ ಎಂದು ವರದಿ ಹೇಳಿದೆ.ಭಾರತದ ವೈಮಾಂತರಿಕ್ಷ ಮತ್ತು ರಕ್ಷಣಾ ಕ್ಷೇತ್ರ ಜಗತ್ತಿನಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕ್ಷೇತ್ರಗಳಲ್ಲಿ ಒಂದು, ಕೆಲವೇ ವರ್ಷಗಳ ಹಿಂದೆ ಶೈಶವಾವಸ್ಥೆಯಲ್ಲಿದ್ದ ಭಾರತದ ಈ ಕ್ಷೇತ್ರ ಈಗ ಜಗತ್ತಿನ ಮುಂಚೂಣಿ ಕ್ಷೇತ್ರಗಳಲ್ಲಿ ಒಂದಾಗಿದೆ ಎಂದು ವರದಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT