ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ

Last Updated 15 ಜನವರಿ 2012, 9:50 IST
ಅಕ್ಷರ ಗಾತ್ರ

ಬೆಳಗಾವಿ: ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ. ಡಾ.ಬಿ.ಆರ್. ಅಂಬೇಡ್ಕರ್ ಅವರು ನೀಡಿದಂತಹ ಸಂವಿಧಾನ ವಿಶ್ವದ ಬೇರೆಲ್ಲೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯಪಟ್ಟರು.
ನಗರದಲ್ಲಿ ನಿರ್ಮಿಸಿರುವ ಅಂಬೇಡ್ಕರ್ ಭವನ (ಬುದ್ಧ ವಿಹಾರ) ಕಟ್ಟಡ ಉದ್ಘಾಟನೆ ಹಾಗೂ ಅವರ ಪುತ್ಥಳಿ ಅನಾವರಣಗೊಳಿಸಿ ಅವರು ಮಾತನಾಡಿದರು.

`ಜನರಿಂದ ಜನರಿಗಾಗಿ ಪ್ರಜಾಪ್ರಭುತ್ವ ಎಂಬುದನ್ನು ಸಾರಿದ ಅಂಬೇಡ್ಕರ್ ಅವರು, ಸಾಮಾಜಿಕ ನ್ಯಾಯ ಒದಗಿಸಿಕೊಟ್ಟ ಕೀರ್ತಿ ಅವರಿಗೆ ಸಲ್ಲುತ್ತದೆ~ ಎಂದು ಅವರು ಹೇಳಿದರು.

`ಎಲ್ಲರಿಗೂ ಸಮಾನವಾಗಿ ಬಾಳಲು ಅವಕಾಶ ಮಾಡಿಕೊಟ್ಟ ಪುಣ್ಯಾತ್ಮ ಅವರಾಗಿದ್ದು, ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು~ ಎಂದು ಅವರು ಸಲಹೆ ಮಾಡಿದರು.

`ಶೈಕ್ಷಣಿಕ ಅಭಿವೃದ್ಧಿ, ಮೇಲು-ಕೀಳನ್ನು ಹೊಡೆದು ಹಾಕಿದ್ದಾರೆ. ಅವರು ದೇಶದ ಜನನಾಯಕರಾಗಿದ್ದರು. ಬುದ್ಧ, ಬಸವ, ಗಾಂಧಿ ಹಾಗೂ ಅಂಬೇಡ್ಕರ್ ದೇಶದ ನಾಲ್ಕು ಆಧಾರ ಸ್ತಂಭವಾಗಿದ್ದಾರೆ~ ಎಂದು ಹೇಳಿದರು.
`ಮುಖ್ಯಮಂತ್ರಿಯಾಗಿದ್ದ ಮೂರುವರೆ ವರ್ಷಗಳ ಕಾಲ ಉತ್ತಮ ಆಡಳಿತ ನೀಡಿದ್ದೇನೆ. ಹಲವಾರು ನೂತನ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇನೆ. ಬೆಳಗಾವಿಯು ಬೆಂಗಳೂರಿಗೆ  ಸರಿ ಸಮನಾಗಿ ಬೆಳೆಯುತ್ತಿದೆ~ ಎಂದು ಅವರು ತಿಳಿಸಿದರು.

ಸಂಸದ ಸುರೇಶ ಅಂಗಡಿ ಮಾತನಾಡಿ, ಅಂಬೇಡ್ಕರ್ ಭವನವನ್ನು ಪ್ರವಾಸಿ ತಾಣವನ್ನಾಗಿಸಬೇಕು. ನಿರ್ವಹಣೆಗೆ ಸೂಕ್ತ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಹೇಳಿದರು.

`ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉಪಮುಖ್ಯಮಂತ್ರಿಯಾಗಿದ್ದಾಗ ಭವನ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿದ್ದರು. ಇದರ ಸದುಪಯೋಗ ಜನರಿಗೆ ತಲುಪಿಸುವ ಕೆಲಸ ಆಗಬೇಕು~ ಎಂದರು.

ಶಾಸಕ ಫಿರೋಜ್ ಸೇಠ ಅಧ್ಯಕ್ಷತೆ ವಹಿಸಿದ್ದರು. ಬೌದ್ಧ ಗುರು ಬಂತಜಿ ದಮ್ಮದೀಪ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ, ಸಂಸದ ರಮೇಶ ಕತ್ತಿ, ರಾಜ್ಯಸಭೆ ಸದಸ್ಯ ಪ್ರಭಾಕರ ಕೋರೆ, ಶಾಸಕರಾದ ಅಭಯ ಪಾಟೀಲ, ಜಗದೀಶ ಮೆಟಗುಡ್ಡ, ಸಂಜಯ ಪಾಟೀಲ, ಪ್ರಹ್ಲಾದ ರೇಮಾನಿ. ಡಿ.ಎಂ. ಐಹೊಳೆ, ಮಹಾಂತೇಶ ಕವಟಗಿಮಠ, ಜಿ.ಪಂ. ಅಧ್ಯಕ್ಷ ಈರಣ್ಣ ಕಡಾಡಿ ಮತ್ತಿತರರು ಪಾಲ್ಗೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT