ಈ ಮಧ್ಯೆ ರಾಯಭಾರಿ ಕಚೇರಿಗೆ ಯಾವುದೇ ಹಾನಿಯಾಗಿಲ್ಲ. ಭಾರತದ ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಮೂಲಗಳು ಕ್ಸಿನುವಾ ಸುದ್ದಿ ಸಂಸ್ಥೆಗೆ ತಿಳಿಸಿವೆ.
ಆಫ್ಘಾನ್ ರಕ್ಷಣಾ ತಂಡವು ಘಟನಾ ಸ್ಥಳವನ್ನು ಸುತ್ತುವರಿದಿದ್ದು ಹಲವು ಆಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ.
'ಜಲಾಲಾಬಾದ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿದೆ. ಭಾರತೀಯ ಅಧಿಕಾರಿಗಳೆಲ್ಲರೂ ಸುರಕ್ಷಿತರಾಗಿದ್ದಾರೆ' ಎಂದು ನವದೆಹಲಿಯಲ್ಲಿರುವ ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ಸಯ್ಯದ್ ಅಕ್ಬರುದ್ದೀನ್ ತಮ್ಮ ಟ್ವಿಟರ್‌ನಲ್ಲಿ ಹೇಳಿದ್ದಾರೆ.
ಸ್ಫೋಟದಿಂದಾಗಿ ರಾಯಭಾರಿ ಕಚೇರಿ ಬಳಿ ದಟ್ಟವಾದ ಹೊಗೆ ಆವರಿಸಿದ್ದು, ಹಲವು ಮನೆಗಳು ಮತ್ತು ಅಂಗಡಿಮುಂಗಟ್ಟುಗಳಿಗೆ ಹಾನಿಯಾಗಿದೆ.