ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ವಾಯುಸೇನೆಗೆ MI-17V5 ಹೆಲಿಕಾಪ್ಟರ್ ಸೇರ್ಪಡೆ

Last Updated 16 ಫೆಬ್ರುವರಿ 2012, 8:55 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ರಷ್ಯಾ ನಿರ್ಮಿತ ಅತ್ಯಾಧುನಿಕ ಎಮ್‌ಐ -17ವಿ5 (MI-17V5) ಹೆಲಿಕಾಪ್ಟರ್ ಶುಕ್ರವಾರ ಭಾರತೀಯ ವಾಯುಸೇನೆಗೆ (ಐಎಎಫ್) ಸೇರ್ಪಡೆಯಾಗಲಿದೆ.
 
ದೂರದ ಗಡಿ ಹಾಗೂ ಪರ್ವತ ಪ್ರದೇಶಗಳಲ್ಲಿರುವ ಸೇನಾ ನೆಲೆಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸುವ ಕಾರ್ಯಕ್ಕಾಗಿ ಈ ಹೆಲಿಕಾಪ್ಟರ್‌ಗಳು ಖರೀದಿಸಲಾಗಿದೆ.

ಭಾರತವು 2008ರಲ್ಲಿ 1.34 ಶತ ಕೋಟಿ ಅಮೆರಿಕನ್ ಡಾಲರ್ ವೆಚ್ಚದಲ್ಲಿ ರಷ್ಯಾ ನಿರ್ಮಿತ 80 ನೂತನ MI-17V5 ಹೆಲಿಕಾಪ್ಟರ್‌ಗಳ ಖರೀದಿ ಒಪ್ಪಂದ ಮಾಡಿಕೊಂಡಿತ್ತು.

ಅವುಗಳಲ್ಲಿ ಕಳೆದ ಸೆಪ್ಟೆಂಬರ್‌ನಲ್ಲಿ ಐಎಎಫ್‌ಗೆ 21 ಹೆಲಿಕಾಪ್ಟರ್‌ಗಳನ್ನು ಹಸ್ತಾಂತರಿಸಲಾಗಿದೆ. ಈ ಹೆಲಿಕಾಪ್ಟರ್‌ಗಳ ಬಳಕೆಯಿಂದ ಸೇನೆಗೆ ಮತ್ತಷ್ಟು ಬಲ ಬಂದಂತಾಗಿದೆ ಎಂದು ಐಎಎಫ್‌ಗೆ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT