ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರೀ ಮಳೆ ಸಾಧ್ಯತೆ

Last Updated 14 ಜುಲೈ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಒಳನಾಡಿನಲ್ಲಿ ಮುಂಗಾರು ಕ್ಷೀಣಿಸಿದೆ. ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಪ್ರದೇಶ ,ಉತ್ತರ ಒಳನಾಡಿನಲ್ಲಿ ಮಳೆಯಾಗಿದೆ. 

ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ  8 ಸೆಂ.ಮೀ ಮಳೆಯಾಗಿದೆ.  ಕಾರವಾರ 7, ಮಂಕಿ, ಹೊಸಕೋಟೆ 6, ಬೆಳ್ತಂಗಡಿ, ಅಂಕೋಲಾ 4, ಉಡುಪಿ, ಗೋಕರ್ಣ, ಮಂಚಿಕೇರಿ, ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ 3, ಹೊನ್ನಾವರ, ಕದ್ರಾ, ಭಾಲ್ಕಿ, ಗುರುಮಿಟ್ಕಲ್, ಚಿಕ್ಕಬಳ್ಳಾಪುರದಲ್ಲಿ 2 ಸೆಂ.ಮೀ ಮಳೆಯಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ  ಕರಾವಳಿಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ  ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT