ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಲಚಂದ್ರರ ಕೃತಿಗೆ ಕಾವ್ಯಾನಂದ ಪುರಸ್ಕಾರ

Last Updated 19 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಸಂವರ್ಧಕ ಟ್ರಸ್ಟ್‌ನ 2012ರ ಸಾಲಿನ ಕಾವ್ಯಾ­ನಂದ ಪುರಸ್ಕಾರವು ಭಾಲಚಂದ್ರ ಜಯಶೆಟ್ಟಿ ಅವರ ‘ಶರಣ ಚಿಂತನೆ­ಯ ನೆಲೆಯಲ್ಲಿ’ ಕೃತಿಗೆ ದೊರೆತಿದೆ.

ಕವಿ ಡಾ.ಸಿದ್ದಯ್ಯ ಪುರಾಣಿಕ ಅವರ ಕಾವ್ಯನಾಮವಾದ ಕಾವ್ಯಾ­ನಂದ ಹೆಸರಿನ ಈ ಪುರಸ್ಕಾರವು ₨ 25,000 ನಗದು ಮತ್ತು ಪ್ರಶಸ್ತಿ ಫಲಕ  ಒಳಗೊಂಡಿದೆ.

ಫೆಬ್ರುವರಿಯಲ್ಲಿ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್‌ ಅಧ್ಯಕ್ಷೆ ವಿಜಯಾ ನಂದೀಶ್ವರ ತಿಳಿಸಿದ್ದಾರೆ.

ಸಂಸ್ಕೃತಿ ಪ್ರಶಸ್ತಿ: ಪ್ರಜಾ ಸಾಂಸ್ಕೃತಿಕ ವೇದಿಕೆ ಮತ್ತು ಕಾವ್ಯಮಂಡಲ ಸಂಸ್ಥೆ­ಗಳು ನೀಡುವ ‘ಪ್ರೊ.ಕಿ.ರಂ.­ನಾಗ­ರಾಜ ಸಂಸ್ಕೃತಿ ಪ್ರಶಸ್ತಿ’ಗೆ ಲೇಖಕ ಪ್ರೊ.ಕೆ.ಮರುಳಸಿದ್ದಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಜನವರಿ 3ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT