ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಭಾಷೆ ಶ್ರೀಮಂತಿಕೆಗೆ ವಚನ ಸಾಹಿತ್ಯದ ಕೊಡುಗೆ ಅಪಾರ'

Last Updated 20 ಡಿಸೆಂಬರ್ 2012, 8:11 IST
ಅಕ್ಷರ ಗಾತ್ರ

ಬ್ಯಾಡಗಿ: ನಾಡಿನ ಶರಣರು ವಚನ ಸಾಹಿತ್ಯದ ಮೂಲಕ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ್ದಾರೆ. ನಾಡಿನ ಪ್ರತಿಯೊಬ್ಬ ವ್ಯಕ್ತಿ ಭಾಷಾಭಿಮಾನ ಬೆಳೆಸಿಕೊಂಡಾಗ ಮಾತ್ರ ಕನ್ನಡ ಭಾಷೆ ಸಮೃದ್ಧವಾಗಿ ಬೆಳೆಯಲು ಸಾಧ್ಯವೆಂದು ರಾಣೆಬೆನ್ನೂರು ಬಸವ ಕೇಂದ್ರದ ಅಧ್ಯಕ್ಷೆ ಸುವರ್ಣಮ್ಮ ಪಾಟೀಲ ಹೇಳಿದರು.

ಸೋಮವಾರ ತಾಲ್ಲೂಕಿನ ಮೋಟೆಬೆನ್ನೂರ ಗ್ರಾಮದ ನವೋದಯ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಆಯೋಜಿಸಿದ ವಚನ ಸಾಹಿತ್ಯ ಕುರಿತು ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಚನಗಳು ನಮ್ಮ ಜೀವನಕ್ಕೆ ದಾರಿ ದೀಪವಾಗಿದ್ದು, ಮಕ್ಕಳಲ್ಲಿ ಶರಣರ ಆದರ್ಶಗಳನ್ನು ಒಡಮೂಡಿಸಲು ಅವರ ತತ್ವ, ಆದರ್ಶ ಹಾಗೂ ಸಿದ್ಧಾಂತವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.

ದತ್ತಿ ದಾನಿಗಳಾದ ಡಾ. ಮೂಕಯ್ಯಸ್ವಾಮಿ ಕಳಸೂರಮಠ ವಿದೇಶದಲ್ಲಿದ್ದರೂ ಅವರ ತಂದೆಯವರ ಸ್ಮರಣಾರ್ಥ ದತ್ತಿದಾನ ನೀಡುವ ಮೂಲಕ ಭಾಷಾಭಿಮಾನ ಮೆರೆದಿದ್ದಾರೆ. ಅವರಂತೆ ಪ್ರತಿಯೊಬ್ಬರೂ ನಾಡು, ನುಡಿ ಹಾಗೂ ಜಲದ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು. ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಡಾ. ಮೂಕಯ್ಯಸ್ವಾಮಿ ಕಳಸೂರಮಠ ಉದ್ಘಾಟಿಸಿದರು. ಬಳಿಕ ದತ್ತಿ ದಾನಿ ದಂಪತಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಪರಿಷತನ ಹೋಬಳಿ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಕನ್ನಡ ಭಾಷೆ  ಎರಡು ಸಾವಿರ ವರ್ಷಗಳ ಸುಧೀರ್ಘ ಇತಿಹಾಸ ಹೊಂದಿದೆ. ಕನ್ನಡ ನಾಡಿನ ಕವಿಗಳು, ಸಾಹಿತಿಗಳು ಸಂತರು, ಶರಣರು, ಕನ್ನಡ ಸಾಹಿತ್ಯ ಹಾಗೂ ಸಂಸ್ಕೃತಿಗೆ ತಮ್ಮದೆ ಆದ ಕೊಡುಗೆ ನೀಡಿದ್ದಾರೆ. ಅದನ್ನು ಉಳಿಸಿ ಬೆಳೆಸುವ ಕಾಯಕ ನಮ್ಮದಾಗಿದೆ ಎಂದರು.

ಪರಿಷತ್‌ನ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಬಿ. ಮಾಸಣಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಮಾದೇವಿ ಕಳಸೂರಮಠ, ಡಾ. ಪ್ರೇಮಾನಂದ ಲಕ್ಕಣ್ಣನವರ, ಎ.ಎಸ್. ಬಣಕಾರ, ಪಿ.ಆರ್. ಮಠದ, ಎಸ್.ಎಂ. ಪಾಟೀಲ, ಸಿ.ಜಿ. ಮಲ್ಲೂರು, ಬಿ.ಎಫ್. ದೊಡ್ಮನಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಪರಿಷತ್ ತಾಲ್ಲೂಕು ಅಧ್ಯಕ್ಷ ಮಾಲತೇಶ ಅರಳಿಮಟ್ಟಿ ಸ್ವಾಗತಿಸಿದರು. ಎಸ್.ಪಿ. ಚಿರಂತಿಮಠ ನಿರ್ವಹಿಸಿದರು. ಎಸ್. ಎಚ್. ಗೊರವರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT