ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂ ಅಕ್ರಮ: ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ಪ್ರಕರಣ ದಾಖಲು

Last Updated 2 ಜನವರಿ 2012, 10:10 IST
ಅಕ್ಷರ ಗಾತ್ರ

ಬೆಂಗಳೂರು, (ಪಿಟಿಐ): ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಡಿನೋಟಿಫೈ ಮಾಡಿದ ಆರೋಪದ ಮೇಲೆ ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತದ ವಿಶೇಷ ನ್ಯಾಯಾಲಯದಲ್ಲಿ ಸೋಮವಾರ ಪ್ರಕರಣವೊಂದು ದಾಖಲಾಗಿದೆ.

ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಡಿನೋಟಿಫೈ ಮಾಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಭಾರತೀಯ ಜನತಾ ಪಕ್ಷದ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈಗ, ಜಿಡಿಎಸ್ ನ ನಾಯಕ ಕುಮಾರ ಸ್ವಾಮಿ ಅವರು, ಅಕ್ರಮವಾಗಿ ಸರ್ಕಾರಿ ಭೂಮಿ ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿರುವ ಕರ್ನಾಟಕದ ಎರಡನೇ ಮುಖ್ಯಮಂತ್ರಿಯಾಗಿದ್ದಾರೆ.  

ಅರ್ಕಾವತಿ ಬಡಾವಣೆಯಲ್ಲಿ ವಸತಿ ನಿವೇಶನಗಳನ್ನು ಅಭಿವೃದ್ಧಿಪಡಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಶಪಡಿಸಿಕೊಂಡಿದ್ದ  ಥಣಿಸಂದ್ರ ಗ್ರಾಮದ 3.8 ಎಕರೆ ಭೂಮಿಯನ್ನು ಕಾನೂನು ಉಲ್ಲಂಘಿಸಿ ಕುಮಾರಸ್ವಾಮಿ ಅವರು ಡಿನೋಟಿಫೈ ಮಾಡಿದ್ದಾರೆ ಎಂದು ಮಧುಸ್ವಾಮಿ ಎಂಬುವವರು ದೂರು ಸಲ್ಲಿಸಿದ್ದರು. ಈ ಅಕ್ರಮದಲ್ಲಿ ಮಾಜಿ ಸಚಿವ ಸಿ.ಚೆನ್ನಿಗಪ್ಪ ಅವರದ್ದೂ ಪಾಲಿದೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ.

ಭಾರತೀಯ ಜನತಾ ಪಕ್ಷವು 2007ರ ಅಕ್ಟೋಬರ್ ನಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮ್ಮಶ್ರ ಸರ್ಕಾರಕ್ಕೆ ಬೆಂಬಲ ವಾಪಸ್ಸು ಪಡೆದಾಗ ಸರ್ಕಾರ ಬಿದ್ದುಹೋಯಿತು. ಅದೇ ಸಂದರ್ಭದಲ್ಲಿ ಅಂದು ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿದ್ದ  ಕುಮಾರಸ್ವಾಮಿ ಅವರು ಈ ಅಕ್ರಮ ಎಸಗಿದ್ದಾರೆ ಎಂದು ದೂರಲಾಗಿದೆ.

ಭೂ ಹಗರಣಗಳ ಕಾರಣ ಕಾನೂನು ಕ್ರಮ ಎದುರಿಸುತ್ತಿರುವ ಸಚಿವರುಗಳಲ್ಲಿ ವಸತಿ ಸಚಿವ ವಿ.ಸೋಮಣ್ಣ, ಕೈಗಾರಿಕಾ ಸಚಿವ ಮುರಗೇಶ್ ನಿರಾಣಿ, ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಸೇರಿದ್ದಾರೆ. ಅವರೊಂದಿಗೆ ಬಿಜೆಪಿ ಶಾಸಕರಾದ ಸಿ.ಟಿ.ರವಿ, ನೆಹ್ರೂ ಓಲೆಕಾರ ಅವರ ಮೇಲೂ ಭೂ ಅಕ್ರಮ ನಡೆಸಿದ ಆರೋಪಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT