ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂ ಕಬಳಿಕೆ ಪ್ರಕರಣ: ಸ್ಟಾಲಿನ್ ಬಂಧನ, ಬಿಡುಗಡೆ

Last Updated 1 ಆಗಸ್ಟ್ 2011, 19:30 IST
ಅಕ್ಷರ ಗಾತ್ರ

ಚೆನ್ನೈ (ಐಎಎನ್‌ಎಸ್): ಪಕ್ಷದ ಕೆಲವು ಮುಖಂಡರ ವಿರುದ್ಧ ಭೂ ಕಬಳಿಕೆ ಪ್ರಕರಣ ದಾಖಲಿಸಿ ಕೊಂಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಡಿಎಂಕೆ ಮುಖಂಡ ಎಂ.ಕೆ. ಸ್ಟಾಲಿನ್ ಮತ್ತು ಪಕ್ಷದ ಸುಮಾರು 40,000 ಕಾರ್ಯಕರ್ತರನ್ನು ಸೋಮವಾರ ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು.

ಡಿಎಂಕೆಗೆ ಪ್ರತಿಭಟನೆ ನಡೆಸಲು ಎಐಎಡಿಎಂಕೆ ನೇತೃತ್ವದ ರಾಜ್ಯ ಸರ್ಕಾರ ಅನುಮತಿ ನೀಡದಿರುವ ಕ್ರಮವನ್ನು ಖಂಡಿಸಿದ ಸ್ಟಾಲಿನ್, ಡಿಎಂಕೆ ಸರ್ಕಾರ ಇದ್ದಾಗ ಎಐಎಡಿಎಂಕೆಗೆ ಪ್ರತಿಭಟನೆ ನಡೆಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸಿದರೆ ಪ್ರತಿಭಟನೆ ನಡೆಸಲಾಗುವುದು ಎಂದರು.

ಭೂ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಬಂದ ಡಿಎಂಕೆ ಮಾಜಿ ಸಚಿವ ವೀರಪಾಂಡಿ ಎಸ್. ಆರ‌್ಮುಗಂ ಅವರನ್ನು ಶನಿವಾರ ಬಂಧಿಸಿ ಕೊಯಮತ್ತೂರು ಜೈಲಿಗೆ ಕಳುಹಿಸಲಾಗಿದೆ. ಇದಲ್ಲದೇ ಡಿಎಂಕೆ ಶಾಸಕ ಜೆ. ಅನ್ಬಗಳನ್ ಅವರನ್ನು ಶನಿವಾರ ಚೆನ್ನೈನಲ್ಲಿ ಬಂಧಿಸಲಾಗಿತ್ತು.

ಪಕ್ಷದ ಮುಖಂಡರ ವಿರುದ್ಧ ಭೂ ಕಬಳಿಕೆ ಪ್ರಕರಣಗಳನ್ನು ದಾಖಲಿಸಿ ರಾಜಕೀಯ ದ್ವೇಷ ಸಾಧಿಸಲಾಗುತ್ತಿದೆ ಎಂದು ಡಿಎಂಕೆ ಅಧ್ಯಕ್ಷ ಎಂ. ಕರುಣಾನಿಧಿ ಹೇಳಿದ್ದಾರೆ.

ಡಿಎಂಕೆ ಸರ್ಕಾರದ ಅವಧಿಯಲ್ಲಿಯೇ ಕೆಲವು ಮುಖಂಡರ ವಿರುದ್ಧ ಭೂ ಕಬಳಿಕೆ ಪ್ರಕರಣಗಳು ದಾಖಲಾಗಿವೆ. ಈಗ ಪೊಲೀಸರು ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ತಮ್ಮ ವಿರುದ್ಧ ಮಾಡಲಾಗಿರುವ ಆರೋಪಗಳಿಗೆ ಸಮಜಾಯಿಷಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT