ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂ ಸುಧಾರಣೆ: ಮುಖ್ಯಮಂತ್ರಿಗಳ ಜತೆ ಪ್ರಧಾನಿ ಚರ್ಚೆ ಸಾಧ್ಯತೆ

Last Updated 10 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಭೂ ಸುಧಾರಣೆ ವಿಚಾರಗಳು, ಭೂ ದಾಖಲೆಗಳ ಆಧುನೀಕರಣ, ಕಂದಾಯ ಆಡಳಿತದ ನವೀಕರಣ ಕುರಿತು ಚರ್ಚಿಸಲು ಪ್ರಧಾನಿ ಮನಮೋಹನ್ ಸಿಂಗ್ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವ ಸಾಧ್ಯತೆ ಇದೆ.

`ಭೂ ಸುಧಾರಣಾ ವಿಷಯಗಳು ಆಯಾಯ ರಾಜ್ಯಕ್ಕೆ ಸೇರಿದ್ದಾಗಿರುವುದರಿಂದ ಇದಕ್ಕೆ ಸಂಬಂಧಪಟ್ಟ ಎಲ್ಲ ವಿಚಾರಗಳೂ ಸಭೆಯಲ್ಲಿ ಚರ್ಚೆಗೆ ಬರಲಿವೆ~ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಜೈರಾಂ ರಮೇಶ್ ಶನಿವಾರ ಹೇಳಿದ್ದಾರೆ.

ಯಾವುದೇ ಭೂ ಸುಧಾರಣಾ ಕಾರ್ಯಕ್ರಮಗಳಿಗೆ ಭೂ ದಾಖಲೆಗಳ ಪರಿಷ್ಕರಣೆ ಅಗತ್ಯವಾಗಿರುವುದರಿಂದ ಮತ್ತು ಅದರಲ್ಲೂ ಮುಖ್ಯವಾಗಿ ಬುಡಕಟ್ಟು ಪ್ರಾಂತ್ಯಗಳಲ್ಲಿ ಸ್ಥಳೀಯ ಆಡಳಿತವೇ ಈ ಕೆಲಸವನ್ನು ಮಾಡಬೇಕಾಗಿರುವುದರಿಂದ ಎಲ್ಲ ರಾಜ್ಯಗಳನ್ನೂ ಒಂದೆಡೆ ಸೇರಿಸುವ ಅಗತ್ಯವಿದೆ ಎಂದು ರಮೇಶ್ ಹೇಳಿದ್ದಾರೆ. ರಾಜ್ಯಗಳಲ್ಲಿ ಭೂ ದಾಖಲೆಗಳ ಆಧುನೀಕರಣ ಕಾರ್ಯ ತುಂಬಾ ನಿಧಾನವಾಗಿ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT