ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಮಾಪನ: 6 ತಿಂಗಳಲ್ಲಿ 1.73 ಲಕ್ಷ ಅರ್ಜಿ

ಬೆಳಗಾವಿ ವಿಧಾನಮಂಡಲ ಅಧಿವೇಶನ–2013
Last Updated 5 ಡಿಸೆಂಬರ್ 2013, 8:43 IST
ಅಕ್ಷರ ಗಾತ್ರ

ಸುವರ್ಣ ಸೌಧ (ಬೆಳಗಾವಿ): ಭೂ ಮಾಪನ ಕೋರಿ ರಾಜ್ಯದಲ್ಲಿ ಕಳೆದ ಆರು ತಿಂಗಳಲ್ಲಿ ಬಂದ ಅರ್ಜಿಗಳು ೧,೭೩,೦೭೯.
ಕಾಂಗ್ರೆಸ್ ನ ಕೆ.ಪ್ರತಾಪಚಂದ್ರ ಶೆಟ್ಟಿ ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಬುಧವಾರ ವಿಧಾನ ಪರಿಷತ್ತಿನಲ್ಲಿ ನೀಡಿದ ಉತ್ತರದಲ್ಲಿ ಈ ಮಾಹಿತಿಯನ್ನು ಒದಗಿಸಿದರು.

ಕಳೆದ ಮೇ ತಿಂಗಳಿಂದ ಅಕ್ಟೋಬರ್ ವರೆಗೆ ಈ ಅರ್ಜಿಗಳು ಬಂದಿದ್ದು ಅವುಗಳ ಪೈಕಿ ೧,೧೮,೬೪೫ ಅರ್ಜಿ ಗಳನ್ನು ವಿಲೇವಾರಿ ಮಾಡ ಲಾಗಿದೆ ಎಂದು ತಿಳಿಸಿದ ಸಚಿವರು ನವೆಂಬರ್ ಒಂದರಿಂದ ಇಲಾಖೆಯ ಎಲ್ಲ ಸೇವೆ ಗಳನ್ನು ಗಣಕೀಕರಣಗೊಳಿಸಲಾಗಿದ್ದು ಅರ್ಜಿಗಳ ತ್ವರಿತ ವಿಲೇವಾರಿಗೆ ಇದು ನೆರವಾಗಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಒಟ್ಟು ೩೪೬೨ ಮಂದಿ ಕಾಯಂ ಭೂಮಾಪಕರು ಮತ್ತು ೨೨೦೨ ಮಂದಿ ಪರವಾನಗಿ ಪಡೆದ ಭೂಮಾಪಕರು ಇದ್ದಾರೆ. ೧೮೬೯ ಮಂದಿಯನ್ನು ಹೊಸದಾಗಿ ನೇಮಕ ಮಾಡಲಾಗಿದ್ದು ಆರು ತಿಂಗಳ ತರಬೇತಿ ನಂತರ ಅವರು ಸೇವೆಗೆ ಸೇರಲಿದ್ದಾರೆ ಎಂದು ಸಚಿವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT