ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಮಾಲೀಕರ ದಬ್ಬಾಳಿಕೆ ತಡೆಯಲು ಮನವಿ

Last Updated 6 ಏಪ್ರಿಲ್ 2013, 6:12 IST
ಅಕ್ಷರ ಗಾತ್ರ

ಬೆಳಗಾವಿ: ಅಥಣಿ ತಾಲ್ಲೂಕಿನ ನಾಗ ನೂರು ಪಿ.ಕೆ. ಗ್ರಾಮದ ಭೂಮಾಲೀಕ ರಿಂದ ತಾವು ದಬ್ಬಾಳಿಕೆ ಹಾಗೂ ಜೀವ ಬೆದರಿಕೆ ಎದುರಿಸುತ್ತಿದ್ದೇವೆ. ಈ ವ್ಯವಸ್ಥೆಯಿಂದ ತಮ್ಮನ್ನು ಮುಕ್ತರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಗುರುವಾರ ಮನವಿ ಸಲ್ಲಿಸಿದರು.

ಹಲವು ವರ್ಷಗಳಿಂದ ಮಾನವ ಹಕ್ಕುಗಳಿಂದ ವಂಚಿತರಾಗಿ ಕೇವಲ ಯಂತ್ರಗಳಂತೆ ದಿನಿತ್ಯ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತ ಕಿರುಕುಳ ಅನುಭವಿಸುತ್ತಿದ್ದೇವೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲ ವಾರು ಬಾರಿ ಮನವಿ ಸಲ್ಲಿಸಲಾಗಿದ್ದರೂ ಪ್ರಯೋಜನವಾಗಿಲ್ಲ. ಆದ್ದರಿಂದ ತಮ್ಮ ವಿರುದ್ಧ ದಬ್ಬಾಳಿಕೆ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕಳೆದ ಜನೆವರಿ 31ರಿಂದ ಫೆ. 2ರ ವರೆಗೆ ಅಥಣಿ ತಹಶೀಲ್ದಾರ ಕಾರ್ಯಾಲಯದ ಎದುರು  ಜೀತ ವಿಮುಕ್ತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಆ ಸಂದರ್ಭದಲ್ಲಿ ತಮ್ಮ ಬೇಡಿಕೆಯನ್ನು ಈಡೇರಿಸುವುದಾಗಿ ತಹಶೀಲ್ದಾರರು ಭರವಸೆ ನೀಡಿದ್ದರು. ಆದರೆ, ಈವರೆಗೆ ಭರವಸೆ ಈಡೇರಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಗುರುನಾಥ ಕಾಂಬಳೆ, ಶಿವಗಂಗಾ ಗಡದವರ, ಬಸಪ್ಪ ಕಾಂಬಳೆ, ಡಿ.ಸಿ. ತಳವಾರ ಮತ್ತಿತರರು ಮನವಿ ಸಲ್ಲಿ ಸುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿಶೇಷ ಕಾರ್ಯಕ್ರಮ 11 ರಂದು
ಬೆಳಗಾವಿ:
ಇಲ್ಲಿನ ರಾಘವೇಂದ್ರ ಸ್ವಾಮಿಗಳ ನವವೃಂದಾವನ ಹಾಗೂ ವಿದ್ಯಾಪೀಠದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಇದೇ 11 ರಂದು ಸಂಜೆ 6ಕ್ಕೆ ವಿಶೇಷ ಕಾರ್ಯಕ್ರಮ ಆಯೋಜಿಸ ಲಾಗಿದೆ.ವಿಶೇಷ ಪೂಜೆ, ಅಲಂಕಾರ, ಭಜನೆ, ಸಂಕೀರ್ತನೆ ಕಾರ್ಯಕ್ರಮಗಳು ನಡೆಯಲಿವೆ. ಈ ಸಂದರ್ಭದಲ್ಲಿ ಪಂಡಿತ ವಿಜಯೇಂದ್ರ ಶರ್ಮಾ ಅವರು ಹೊಸ ವರ್ಷದ ಆಗು- ಹೋಗುಗಳು, 12 ರಾಶಿಯವರ ಭವಿಷ್ಯ ಸೇರಿದಂತೆ ಮುಂತಾದ ಸಂಗತಿಗಳ ಕುರಿತು ಭವಿಷ್ಯ ನುಡಿಯಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಬಿಎಸ್‌ಆರ್ ಕಾಂಗ್ರೆಸ್‌ಗೆ  ಪಾಟೀಲ ರಾಜೀನಾಮೆ
ಖಾನಾಪುರ:
  ತಾಲ್ಲೂಕಿನ ಬಿಎಸ್ಸಾರ್ ಕಾಂಗ್ರೆಸ್ ಪಕ್ಷದ ರಾಜ್ಯ ಮುಖಂಡ ಹಾಗೂ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಈ ಪಕ್ಷದ ವತಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್. ಐ. ಪಾಟೀಲ ಗುರುವಾರ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT