ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಸ್ವಾಧೀನ ರದ್ದು

Last Updated 8 ಜೂನ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮಾಲೀಕತ್ವದ `ನಿರಾಣಿ ಶುಗರ್ಸ್‌~ ಕಾರ್ಖಾನೆ ವಿಸ್ತರಣಾ ಯೋಜನೆಗಾಗಿ ಸ್ವಾಧೀನಪಡಿಸಿಕೊಂಡಿದ್ದ 170 ಎಕರೆ ಭೂಮಿಯನ್ನು ಸರ್ಕಾರ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿದೆ.

`ನಿರಾಣಿ ಶುಗರ್ಸ್‌~ ಕಾರ್ಖಾನೆಯು ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನಲ್ಲಿದ್ದು, ಈ ಕಾರ್ಖಾನೆಯ ಡಿಸ್ಟಿಲರಿ ಮತ್ತು ಸಹ ವಿದ್ಯುತ್ ಉತ್ಪಾದನಾ ಘಟಕದ ವಿಸ್ತರಣಾ ಯೋಜನೆಗೆ ಭೂಮಿ ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ರೈತರು 40 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ಸರ್ಕಾರ ರೈತರ ಒತ್ತಡಕ್ಕೆ ಮಣಿದು ಭೂ ಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿಯಲು ನಿರ್ಧರಿಸಿದೆ.

ಈ ನಡುವೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಧರಣಿನಿರತ ರೈತರನ್ನು ಗುರುವಾರ ಭೇಟಿ ಮಾಡುವ ಕಾರ್ಯಕ್ರಮವಿದ್ದು, ಅದರ ಹಿಂದಿನ ದಿನವಾದ ಬುಧವಾರ ಸರ್ಕಾರ ಈ ನಿರ್ಧಾರ ಕೈಗೊಂಡಿರುವುದು ಕುತೂಹಲ ಕೆರಳಿಸಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT