ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಹಗರಣ: ನಿರಾಣಿ ವಿರುದ್ಧ ಎಫ್‌ಐಆರ್

Last Updated 29 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಭೂಹಗರಣದಲ್ಲಿ ಸಿಲುಕಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್. ನಿರಾಣಿ ವಿರುದ್ಧ ಲೋಕಾಯುಕ್ತ ಪೊಲೀಸರು ಶನಿವಾರ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲು ಮಾಡಿದ್ದಾರೆ.

ನಿರಾಣಿ ವಿರುದ್ಧ ಉದ್ಯಮಿ ಆಲಂ ಪಾಷಾ ಸಲ್ಲಿಸಿರುವ ಖಾಸಗಿ ದೂರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ಕೋರ್ಟ್ ಆದೇಶದಂತೆ ಎಫ್‌ಐಆರ್ ದಾಖಲಾಗಿದೆ.

ನಿರಾಣಿ ಅವರ ಜೊತೆ, ಅವರ ಸಹೋದರ ಎಚ್.ನಿರಾಣಿ ಹಾಗೂ ಶಾಂತ, ಕಿರಿಯಣ್ಣನವರ್, ಶರಣಬಸಪ್ಪ, ಬೇಗೂರು ರುದ್ರಮೂರ್ತಿ, ಪೂರ್ಣಚಂದ್ರ, ಮೋಹನ ಹಿರೇಮಠ ಸೇರಿದಂತೆ ಒಟ್ಟು 9 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಲೋಕಾಯುಕ್ತ ಎಸ್ಪಿ ಶಿವಶಂಕರ್ ತನಿಖೆ ಆರಂಭಿಸಿದ್ದಾರೆ.  ಕೆಲವು ಕಂಪೆನಿಗಳಿಗೆ ಕಾನೂನುಬಾಹಿರವಾಗಿ ಭೂಮಿ ಹಂಚಿಕೆ ಮಾಡಿದ್ದಾರೆ, ನಿಯಮ ಉಲ್ಲಂಘಿಸಿ ಭೂಮಿಯನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿದ್ದಾರೆ ಎಂಬಿತ್ಯಾದಿ ಆರೋಪಗಳು ನಿರಾಣಿ ಅವರ  ಮೇಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT