ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟರು ಬಿಜೆಪಿ ತೆಕ್ಕೆಗೆ: ದಿಗ್ವಿಜಯ್‌ಸಿಂಗ್ ಟೀಕೆ

Last Updated 4 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಯೋಜನೆ (ಎನ್‌ಆರ್‌ಎಚ್‌ಎಂ) ಹಗರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಉತ್ತರ ಪ್ರದೇಶದ ಮಾಜಿ ಸಚಿವ ಬಾಬು ಸಿಂಗ್ ಕುಶ್ವಾ ಅವರು ಬಿಜೆಪಿಗೆ ಸೇರ್ಪಡೆಯಾಗಿರುವ ಕುರಿತು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಲೇವಡಿ ಮಾಡಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, `ಕುಶ್ವಾ ಅವರು ಮಾಯಾವತಿ ಸಂಪುಟದಲ್ಲಿ ಸಚಿವರಾಗಿದ್ದಾಗ ಎನ್‌ಆರ್‌ಎಚ್‌ಎಂ ಹಗರಣದಲ್ಲಿ ಭಾಗಿಯಾಗಿದ್ದರು ಎಂಬ ಆರೋಪ ಇದೆ. ಅಂಥವರನ್ನು ಬಿಜೆಪಿ ತನ್ನ ತೆಕ್ಕೆಗೆ ಸೆಳೆದುಕೊಂಡಿದೆ~ ಎಂದು ಟೀಕಿಸಿದರು.


`ಹಗರಣದ ಕುರಿತು ಸಿಬಿಐ ತನಿಖೆ ನಡೆಯುತ್ತಿದೆ. ಇದು ತಿಳಿದಿದ್ದರೂ ಬಿಜೆಪಿ ಮುಖಂಡ ಮುಕ್ತಾರ್ ಅಬ್ಬಾಸ್ ನಕ್ವಿ ಅವರು ಕುಶ್ವಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ. ನಕ್ವಿಯವರಿಗೆ ನಾಚಿಕೆಯಾಗಬೇಕು~ ಎಂದು ಹೇಳಿದರು.

`ಏನನ್ನುತ್ತಾರೆ ಅಣ್ಣಾ?~: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಮತ್ತು ಅವರ ತಂಡದ ಸದಸ್ಯರು ಬಿಜೆಪಿಯ ಭ್ರಷ್ಟಾಚಾರಗಳ ಕುರಿತು ಏಕೆ ಮಾತನಾಡುತ್ತಿಲ್ಲ? ಕುಶ್ವಾ ಅವರ ಪ್ರಕರಣದ ಕುರಿತು ಅಣ್ಣಾ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ ಅವರು, `ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳ ಕುರಿತೂ ಅಣ್ಣಾ ತಂಡದ ಸದಸ್ಯರು ಮೌನವಹಿಸಿದ್ದರು~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT