ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ಕರತಾಡನ

Last Updated 4 ಫೆಬ್ರುವರಿ 2011, 18:35 IST
ಅಕ್ಷರ ಗಾತ್ರ


ಬೆಂಗಳೂರು: ‘... ಭ್ರಷ್ಟಾಚಾರದ ವಿಷಯದಲ್ಲಿ ರಾಜ್ಯ ದೇಶದಲ್ಲೇ ಮೊದಲ ಸ್ಥಾನ ಪಡೆಯುವ ಹಾದಿಯಲ್ಲಿದೆ...’ ಎಂದು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಪ್ರೊ.ಜಿ. ವೆಂಕಟಸುಬ್ಬಯ್ಯ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಹೇಳುತ್ತಿದ್ದಂತೆಯೇ ನೆರೆದಿದ್ದ ಜನಸ್ತೋಮ ಭಾರಿ ಕರತಾಡನದ ಮೂಲಕ ಅವರ ಮಾತಿಗೆ ಸಹಮತ ವ್ಯಕ್ತಪಡಿಸಿತು.

ಸಭಾಂಗಣದ ಹಿಂಭಾಗದಲ್ಲಿ ಕೆಲವು ಮಂದಿ ಕುಣಿದಾಡಿದ ದೃಶ್ಯವೂ ಕಂಡುಬಂದಿತು. ಇದೇ ಸಮಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖವನ್ನು ಹಿಂಬದಿಗೆ ತಿರುಗಿಸಿಕೊಂಡು ಯಾರೊಂದಿಗೋ ಮಾತುಕತೆಯಲ್ಲಿ ತಲ್ಲೆನರಾಗಿದ್ದರು!

ಹಾಡಿನ ಮೂಲಕ ಉದ್ಘಾಟನೆ...
ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಕಾರಜೋಳ ಉದ್ಘಾಟಿಸಿಬೇಕಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ, 9 ವರ್ಷದ ಬಾಲಕಿ ಅದಿತಿ ಕನ್ನಡವೆಂದರೆ ಬರಿ ನುಡಿಯಲ್ಲ.... ಹಾಡಿನ ಮೂಲಕ ಚಾಲನೆ ನೀಡಿದ್ದು ವಿಶೇಷವಾಗಿತ್ತು.

‘ಬಸವ ಕಾವ್ಯ’ ಬಿಡುಗಡೆ ಮಾಡಿದ ರಂಗಭೂಮಿ ಕಲಾವಿದೆ ಬಿ.ಜಯಶ್ರೀ ಭಾಷಣ ಬದಲು ಹಾಡು ಹೇಳಿದರು. ಕಿರುತೆರೆ ನಿರ್ದೇಶಕ ಟಿ.ಎನ್.ಸೀತಾರಾಂ ಅವರಿಗೆ ಹೂಗುಚ್ಚ ನೀಡುವ ಮೂಲಕ ವಸತಿ ಸಚಿವ ವಿ.ಸೋಮಣ್ಣ ಅವರು ಕಲಾ ಪ್ರದರ್ಶನವನ್ನು ಉದ್ಘಾಟಿಸಿದರು.

ಪ್ರೇಕ್ಷಕರ ಸಾಲಿನಲ್ಲಿ ಸಂಸದ ವಿಶ್ವನಾಥ್!
ಸಮ್ಮೇಳನದಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದ ಮೈಸೂರು ಸಂಸದ ವಿಶ್ವನಾಥ್, ಪ್ರೇಕ್ಷಕರ ಗ್ಯಾಲರಿಯ ಮೊದಲ ಸಾಲಿನಲ್ಲಿ ಕುಳಿತಿದ್ದರು. ಇದನ್ನು ಗಮನಿಸಿದ ಪರಿಷತ್ ಅಧ್ಯಕ್ಷ ಡಾ.ಆರ್.ಕೆ.ನಲ್ಲೂರು ಪ್ರಸಾದ್, ಸಾಮಾನ್ಯವಾಗಿ ಇಂತಹ ಸಮ್ಮೇಳನಗಳಲ್ಲಿ ಆಹ್ವಾನ ಪತ್ರದಲ್ಲಿ ಹೆಸರಿಲ್ಲ, ವೇದಿಕೆಗೆ ಕರೆಯಲಿಲ್ಲ ಎಂಬ ದೂರುಗಳು ಕೇಳಿ ಬರುತ್ತವೆ. ಆದರೆ ವಿಶ್ವನಾಥ್ ಅವರು ಸ್ವಯಂ ಪ್ರೇರಣೆಯಿಂದ ಸಮ್ಮೇಳನದಲ್ಲಿ ಪಾಲ್ಗೊಂಡಿರುವುದು ಸಂತೋಷದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT