ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ತನಿಖೆಗೆ ಆಗ್ರಹ

Last Updated 16 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಈ ಬಗ್ಗೆ ಶೀಘ್ರ ತನಿಖೆಯಾಗಬೇಕೆಂದು ಸರ್ಕಾರವನ್ನು ಒತ್ತಾಯಿಸಿ ಭ್ರಷ್ಟಾಚಾರ ನಿರ್ಮೂಲನ ವೇದಿಕೆಯ ಕಾರ್ಯಕರ್ತರು ಗುರುವಾರ ಸೆಂಟ್ರಲ್ ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದರು.

ಹಲವು ನೆಪ ಹೇಳಿ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ ಮಾಡತ್ತಿರುವ ವಿ.ವಿ.ಯ ಆಡಳಿತ ವರ್ಗ, ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಅಲ್ಲದೇ ಸರ್ಕಾರಿ ಕಾಲೇಜುಗಳು, ವಿದ್ಯಾರ್ಥಿ ನಿಲಯಗಳು ಅವ್ಯವಸ್ಥೆಯಿಂದ ಕೂಡಿದ್ದು ಇದರಿಂದ ವಿದ್ಯಾರ್ಥಿಗಳು ನರಳುವಂತಾಗಿದೆ. ಪರೀಕ್ಷೆ ಬರೆದರೂ, ಫಲಿತಾಂಶ ತೃಪ್ತಿದಾಯಕವಾಗಿ ದೊರೆಯುತ್ತಿಲ್ಲ. ಆದ್ದರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ನುರಿತ ಉಪನ್ಯಾಸಕರನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಗ್ರಂಥಾಲಯಗಳಲ್ಲಿ ಅವರಿಗೆ ಬೇಕಾದ ಪುಸ್ತಕಗಳು ದೊರೆಯುತ್ತಿಲ್ಲ. ಆಡಳಿತ ವರ್ಗವು ಹೆಚ್ಚಿನ ಪರೀಕ್ಷಾ ಶುಲ್ಕವನ್ನು ಸಂಗ್ರಹಿಸುತ್ತಿದೆಯಾದರೂ, ಪರೀಕ್ಷೆಯ ಆರಂಭದಿಂದ ಫಲಿತಾಂಶದವರೆಗೂ ವಿದ್ಯಾರ್ಥಿಗಳು ಸಮಸ್ಯೆಯನ್ನು ಎದುರಿಸಬೇಕಾಗಿದೆ. ಅಂಕಪಟ್ಟಿಯಲ್ಲಿ ವಿದ್ಯಾರ್ಥಿಗಳ ಹೆಸರನ್ನೇ ತಪ್ಪಾಗಿ ನೀಡಲಾಗುತ್ತಿದ್ದು, ಇದಕ್ಕೆ ವಿಶ್ವವಿದ್ಯಾಲಯವೇ ಹೊಣೆಯಾಗಿದೆ. ಆದರೆ ಸಮಸ್ಯೆಗಳನ್ನು ಹೇಳಿಕೊಳ್ಳುವ ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಆಡಳಿತ ವರ್ಗ ಸ್ಪಂದಿಸದಿರುವುದು ಖಂಡನೀಯ ಎಂದರು.

 ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಗೋವಿಂದಳ್ಳಿ ದೇವೇಗೌಡ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT