ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ಸಹಿಸುವುದಿಲ್ಲ-ಬಿಜೆಪಿ

Last Updated 15 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ: ಭ್ರಷ್ಟಾಚಾರ ಆರೋಪಕ್ಕೆ ಒಳಗಾಗಿ ಜೈಲು ಸೇರಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪರ ಕಾನೂನು ಹೋರಾಟ ನಡೆಸುವುದಾಗಿ ಬಿಜೆಪಿ ಹೇಳಿದೆ. ಆದರೆ, ಪಕ್ಷ ಭ್ರಷ್ಟಾಚಾರವನ್ನು ಎಂದೂ ಸಹಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಯಡಿಯೂರಪ್ಪ ಬಂಧನ ಕುರಿತು ತೀವ್ರ ಟೀಕೆ ಮಾಡಿರುವ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿರುವ ಬಿಜೆಪಿ, ಆ ಪಕ್ಷವೇ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವಾಗ ಮತ್ತೊಬ್ಬರ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ ಎಂದಿದೆ.

ಯಡಿಯೂರಪ್ಪ ಪರ ಬಿಜೆಪಿ ಕಾನೂನು ಹೋರಾಟ ನಡೆಸಲು ತೀರ್ಮಾನಿಸಿದೆ. ಆದರೆ, ಭ್ರಷ್ಟಾಚಾರವನ್ನು ಸಹಿಸಿಕೊಳ್ಳದಿರಲು ತೀರ್ಮಾನಿಸಿದೆ ಎಂದು ಪಕ್ಷದ ವಕ್ತಾರ ಜೆ.ಪಿ. ನದ್ದ ಹೇಳಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT