ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರಿನ ಮಹಿಳಾ ತಂಡ ಚಾಂಪಿಯನ್

Last Updated 27 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ದಾವಣಗೆರೆ: ಮಂಗಳೂರಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ತಂಡ ನಗರದಲ್ಲಿ ನಡೆದ 34ನೇ ರಾಜ್ಯಮಟ್ಟದ ಅಂತರ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಗಳಿಸಿತು.ನಗರದ ಡಿಆರ್‌ಆರ್ ಪಾಲಿಟೆಕ್ನಿಕ್ ಆಶ್ರಯದಲ್ಲಿ ಭಾನುವಾರ ಮುಕ್ತಾಯಗೊಂಡ ಈ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ತಂಡವು ಅತಿ ಹೆಚ್ಚು ಅಂಕಗಳ ಸಾಧನೆಯ ಮೂಲಕ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ಪುರುಷರ ವಿಭಾಗದಲ್ಲಿ ಮಂಗಳೂರಿನ ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜು ತಂಡ ಪ್ರಶಸ್ತಿ ಪಡೆಯಿತು. ವೈಯಕ್ತಿಕ ಚಾಂಪಿಯನ್: ಮಹಿಳಾ ವಿಭಾಗದಲ್ಲಿ ಮಣಿಪಾಲದ ಡಾ.ಟಿ.ಎಂ.ಎ. ಪೈ ಪಾಲಿಟೆಕ್ನಿಕ್‌ನ ಯಶಸ್ವಿನಿ, ಪುರುಷರ ವಿಭಾಗದಲ್ಲಿ ಆತಿಥೇಯ ದಾವಣಗೆರೆ ಡಿಆರ್‌ಆರ್ ಪಾಲಿಟೆಕ್ನಿಕ್‌ನ ಎಸ್. ಸಂದೀಪ್ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ ಗಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT