ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಅನಿಲ ಟ್ಯಾಂಕರ್ ಪಲ್ಟಿ ಇಬ್ಬರ ಸಾವು

Last Updated 9 ಏಪ್ರಿಲ್ 2013, 8:53 IST
ಅಕ್ಷರ ಗಾತ್ರ

ಮಂಗಳೂರು (ಪಿಟಿಐ):  ಪುತ್ತೂರು ಸಮೀಪದ ಪರ್ನೆ ಬಳಿ ಅನಿಲ್ ಟ್ಯಾಂಕರ್ ಪಲ್ಟಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

ಅನಿಲ ತುಂಬಿದ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿತ್ತು. ಬೆಂಕಿಯ ತೀವ್ರತೆಗೆ ರಸ್ತೆ ಸಮೀಪದ ನಾಲ್ಕು ಮನೆಗಳಿಗೂ ಹಾನಿಯಾಗಿದೆ. ಘಟನೆಯಲ್ಲಿ ಮಗು ಮತ್ತು ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT