ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂತ್ರಾಲಯಕ್ಕೆ ರಸ್ತೆ ಸಂಪರ್ಕ ಸ್ಥಗಿತ

Last Updated 3 ಜೂನ್ 2011, 19:30 IST
ಅಕ್ಷರ ಗಾತ್ರ

ರಾಯಚೂರು:   ಎರಡು ದಿನಗಳಿಂದ  ಸುರಿದ ಮಳೆಗೆ ರಾಯಚೂರು- ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ತುಂಗಭದ್ರಾ ನದಿಗೆ ನಿರ್ಮಿಸಿದ ತಾತ್ಕಾಲಿಕ ಸೇತುವೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ.
ಸೇತುವೆ ಕೊಚ್ಚಿಹೋದ ಹಿನ್ನೆಲೆಯಲ್ಲಿ ದ್ವಿಚಕ್ರವಾಹನ ಹಾಗೂ ಲಘು ವಾಹನಗಳ ಸಂಚಾರವೂ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ರಾಜ್ಯ ಸರ್ಕಾರವು ಮಂತ್ರಾಲಯಕ್ಕೆ ತೆರಳುವ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮಾರು 1.67 ಕೋಟಿ ವೆಚ್ಚದಲ್ಲಿ ತುಂಗಭದ್ರಾ ನದಿಗೆ ತಾತ್ಕಾಲಿಕ ಸೇತುವೆಯನ್ನು ನಿರ್ಮಾಣ ಮಾಡಿತ್ತು.

ಒಂದೆರಡು ತಿಂಗಳ ಹಿಂದೆ ಸ್ವಲ್ಪ ಪ್ರಮಾಣದಲ್ಲಿ ಮಳೆಯಾದ ಸಂದರ್ಭದಲ್ಲಿ ತುಂಗಭದ್ರಾ ನದಿಗೆ ನಿರ್ಮಿಸಲಾದ ತಾತ್ಕಾಲಿಕ ಸೇತುವೆ ಕುಸಿದು ಸುಮಾರು ಒಂದು ವಾರ ಸಂಚಾರ ಸ್ಥಗಿತಗೊಂಡಿತ್ತು.
ಆದರೆ, ಜಿಲ್ಲಾಡಳಿತ ತಾತ್ಕಾಲಿಕ ಸೇತುವೆಯನ್ನು ದುರಸ್ತಿಗೊಳಿಸಿ ಮಂತ್ರಾಲಯಕ್ಕೆ ತೆರಳುವ ಭಕ್ತರಿಗೆ ಅನುಕೂಲ ಮಾಡಿಕೊಟ್ಟಿತ್ತು.

ಈಗ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿರುವುದರಿಂದ ಮಂತ್ರಾಲಯಕ್ಕೆ ತೆರಳುವ ಭಕ್ತರು ರೈಲು ಮಾರ್ಗವಾಗಿ ಹೋಗುವುದು ಅನಿವಾರ್ಯವಾಗಿದೆ. ಸೇತುವೆ ಕೊಚ್ಚಿಹೋದ ಹಿನ್ನೆಲೆಯಲ್ಲಿ ಈಶಾನ್ಯ ಸಾರಿಗೆ ಸಂಸ್ಥೆಗೂ ಸಾಕಷ್ಟು ನಷ್ಟ ಸಂಭವಿಸುತ್ತಿದೆ.

ಒಂದೂವರೆ ವರ್ಷದಿಂದ ಈಶಾನ್ಯ ಸಾರಿಗೆ ಸಂಸ್ಥೆಗೆ ಪ್ರತಿದಿನ 1.50 ಲಕ್ಷ ರೂಪಾಯಿಗಳಷ್ಟು ನಷ್ಟವಾಗುತ್ತಿದೆ. ಅಲ್ಲದೇ ತುಂಗಭದ್ರಾ ಸೇತುವೆ ಮೇಲೆ ಹೋಗುತ್ತಿರುವ ಬಸ್‌ಗಳ ಸಂಚಾರವೂ ಸ್ಥಗಿತಗೊಳಿಸಲಾಗಿದೆ.

ಈ ಸಂಸ್ಥೆಯಿಂದ ಬೆಂಗಳೂರಿಗೆ ತೆರಳುವ ಬಸ್‌ಗಳು ಸ್ಥಗಿತಗೊಳಿಸಲಾಗಿದೆ ಎಂದು ಈಶಾನ್ಯ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎ ಹಾನಗಲ್ `ಪ್ರಜಾವಾಣಿ~ಗೆ ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT