ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಅಭಿವೃದ್ಧಿಯೇ ನೈಜ ಶಿಕ್ಷಣ: ರಶ್ವತ್‌

Last Updated 18 ಡಿಸೆಂಬರ್ 2013, 6:29 IST
ಅಕ್ಷರ ಗಾತ್ರ

ಸಿದ್ದಾಪುರ: ಮಗುವಿನ  ಸರ್ವತೋ­ಮುಖ ಅಭಿವೃದ್ಧಿಯೇ ನೈಜ ಶಿಕ್ಷಣ. ಪ್ರತಿಭಾ ಕಾರಂಜಿ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಒಂದು ಉತ್ತಮ ವೇದಿಕೆ. ರಟ್ಟಾಡಿಯಂತಹ ಗ್ರಾಮೀಣ ಪ್ರದೇಶದಲ್ಲಿ ಊರ ಹಬ್ಬ­ವಾಗಿ ಈ ಪ್ರತಿಭಾ ಕಾರಂಜಿ ನಡೆಯು­ತ್ತಿರುವುದು ಶ್ಲಾಘನೀಯ ಎಂದು ಹಾಲಾಡಿ ಜಿಲ್ಲಾ ಪಂಚಾಯಿತಿ ಸದಸ್ಯ ರಶ್ವತ್ ಕುಮಾರ ಶೆಟ್ಟಿ ಹೇಳಿದರು.

ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ, ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ, ಸಮೂಹ ಸಂಪನ್ಮೋಲ ಕೇಂದ್ರ ಅಮಾಸೆಬೈಲು ಅವರ ಆಶ್ರಯದಲ್ಲಿ ಇತ್ತೀಚೆಗೆ ರಟ್ಟಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಮಾಸೆಬೈಲು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಅವರು ಮಾತನಾಡಿದರು.

ಅಮಾಸೆಬೈಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಡ್ಡಿನಗದ್ದೆ ಸದಾಶಿವ ಶೆಟ್ಟಿ ಅಧ್ಯಕ್ಷತೆ ವಹಿಸಿ, ಪ್ರತಿಭಾ ಕಾರಂಜಿ ಹಮ್ಮಿಕೊಂಡು ಉತ್ತಮವಾಗಿ ಸಂಘಟಿಸಿರುವ ರಟ್ಟಾಡಿ ಗ್ರಾಮದ ಜನರು ಅಭಿನಂದನಾರ್ಹರು ಎಂದರು.

ಮುಖ್ಯ ಅತಿಥಿಗಳಾಗಿ ತಾಲ್ಲೂಕು ಪಂಚಾಯಿತಿ ಸದಸ್ಯ ನವೀನ್ ಚಂದ್ರ ಶೆಟ್ಟಿ ರಟ್ಟಾಡಿ, ಗ್ರಾಮ ಪಂಚಾಯಿತಿ ಸದಸ್ಯರಾದ ರಾಮಣ್ಣ ಹೆಗ್ಡೆ, ಬೋಜು ಕುಲಾಲ ಮತ್ತು ರೇಖಾ, ಅಮಾಸೆಬೈಲು ಪ್ರೌಢ ಶಾಲಾ ಮುಖ್ಯ ಶಿಕ್ಷಕ ತಿಮ್ಮಪ್ಪ, ಹಾಲಾಡಿ ವೃತ್ತದ ಶಿಕ್ಷಣ ಸಂಯೋಜಕಿ ಅನಿತಾ ಶೆಟ್ಟಿ, ಧರ್ಮಸ್ಥಳ ಯೋಜನೆ ಒಕ್ಕೂಟದ ಅಧ್ಯಕ್ಷ ಸತೀಶ ಹೆಗ್ಡೆ ಉಪಸ್ಥಿತರಿದ್ದರು.

ರಟ್ಟಾಡಿ ಶಾಲಾ ಮುಖ್ಯ ಶಿಕ್ಷಕಿ ವಿಜಯಲಕ್ಷಿ ಭಟ್ ಸ್ವಾಗತಿಸಿದರು. ಅಮಾಸೆಬೈಲು ಕ್ಲಸ್ಟರ್‌ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ವಕ್ವಾಡಿ ವೇಣುಗೋಪಾಲ ಹೆಗ್ಡೆ ಪ್ರಾಸ್ತಾವಿಕ ಮಾತನಾಡಿದರು. ಸಹ ಶಿಕ್ಷಕಿ ಶಾಂತ ಶೆಟ್ಟಿಗಾರ, ಎಸ್‌.ಎಸ್. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಾಲಾಭಿವೃದ್ಧಿ ಮತ್ತು ಮೆಲುಸ್ತುವಾರಿ ಸಮಿತಿ ಅಧ್ಯಕ್ಷ ಬೋಜರಾಜ ಶೆಟ್ಟಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT