ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ: ಸುಲೋಚನಾ

Last Updated 21 ಡಿಸೆಂಬರ್ 2012, 7:46 IST
ಅಕ್ಷರ ಗಾತ್ರ

ಸಕಲೇಶಪುರ: ಪ್ರತಿಯೊಬ್ಬರಿಗೂ ಕಡ್ಡಾಯ ಶಿಕ್ಷಣ ಕಲ್ಪಿಸುವ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಯೋಜನೆಗಳು ನಿರೀಕ್ಷಿಸಿದ ಮಟ್ಟದಲ್ಲಿ ಯಶಸ್ವಿಯಾಗುತ್ತಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಸುಲೋಚನಾ ರಾಮಕೃಷ್ಣ ಹೇಳಿದರು.

ತಾಲ್ಲೂಕಿನ ಬೆಳಗೋಡು ಕ್ಲಸ್ಟರ್ ವ್ಯಾಪ್ತಿಯ ಕಾಕನಮನೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹೆಚ್ಚುವರಿ ಹೊಸ ಕಟ್ಟಡಗಳನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.

ಮನೆ ಬಾಗಿಲಿನಲ್ಲಿ ಸರ್ಕಾರಿ ಶಾಲೆಗಳು ಇದ್ದರೂ, ಹತ್ತಾರು ಕಿ.ಮೀ. ದೂರದ ಖಾಸಗಿ ಶಾಲೆಗಳಿಗೆ ಡೊನೇಷನ್ ಕೊಟ್ಟು ಮಕ್ಕಳನ್ನು ಸೇರಿಸುವ ಸಂಸ್ಕೃತಿ ಬದಲಾಗಬೇಕಾಗಿದೆ.
ಶ್ರೀಮಂತರು, ವಿದ್ಯಾವಂತರು, ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿದರೆ, ಖಂಡಿತ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ಹೆಚ್ಚು ಅಭಿವೃದ್ಧಿ ಹೊಂದುತ್ತವೆ ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ರೂಪಾ, ಗ್ರಾಮ ಪಂಚಾಯಿತಿ ಸದಸ್ಯರಾದ ರಾಮಕೃಷ್ಣ, ದೊರೆರಾಜು, ಶಿಕ್ಷಣ ಸಂಯೋಜಕಿ ಚಂಗಡಿಹಳ್ಳಿ ಯಶೋದಾ ಸಿದ್ದಣ್ಣ, ಬಿಆರ್‌ಪಿ ಕೇಶವಮೂರ್ತಿ, ಶಾಲೆಯ ಮುಖ್ಯ ಶಿಕ್ಷಕರಾದ ಎಚ್.ಐ.ಶಿವಣ್ಣ ಇತರರು ಇದ್ದರು.

ಚಿತ್ರ ಬರೆಯುವ ಸ್ಪರ್ಧೆ ನಾಳೆ
ಮೈಸೂರು:
2012ರ ದಸರಾ ವಸ್ತುಪ್ರದರ್ಶನ ಲಲಿತಕಲೆ ಮತ್ತು ಕರಕುಶಲ ಉಪಸಮಿತಿ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆಯನ್ನು ಡಿ.22ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಸ್ಪರ್ಧಿಗಳಿಗೆ ಡ್ರಾಯಿಂಗ್ ಶೀಟ್ ಮಾತ್ರ ನೀಡಲಾಗುತ್ತದೆ. ಮಾಹಿತಿಗೆ ಸಮಿತಿಯ ಸದಸ್ಯ ಕಾರ್ಯದರ್ಶಿ ಸಂಪರ್ಕಿಸಲು ಕೋರಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT