ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳಲ್ಲಿ ಕನ್ನಡ ಪ್ರೀತಿ ಮೂಡಿಸಿ

Last Updated 27 ಜನವರಿ 2012, 10:35 IST
ಅಕ್ಷರ ಗಾತ್ರ

ಕೋಲಾರ: ಮಕ್ಕಳಲ್ಲಿ ಕನ್ನಡ ಪ್ರೀತಿ, ಶಾಲೆಗಳಲ್ಲಿ ಕನ್ನಡದ ವಾತಾವರಣ ವನ್ನು ಮೂಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಅಭಿಪ್ರಾಯಪಟ್ಟರು.

ನಗರದ ಟಿ.ಚೆನ್ನಯ್ಯ ರಂಗಮಂದಿ ರದಲ್ಲಿ  ಗುರುವಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನುಡಿತೇರು ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು, ಗಡಿಜಿಲ್ಲೆಯಾದ ಕೋಲಾರದ ಮೂಲಕವೇ ಕನ್ನಡ ನುಡಿತೇರು ರಾಜ್ಯದ ಇತರೆ ಜಿಲ್ಲೆಗಳಿಗೆ ಹೊರ ಟಿರುವುದು ಹೆಮ್ಮೆಯ ವಿಚಾರ. ನುಡಿ ತೇರಿನ ಮೂಲಕವಾದರೂ ನಾಡಿನಲ್ಲಿ ಕನ್ನಡ ಪ್ರೇಮ ದುಪ್ಪ ಟ್ಟಾಗಲಿ ಎಂದು ಅವರು ಹಾರೈಸಿದರು.

ನಗರಸಭೆ ಅಧ್ಯಕ್ಷೆ ನಾಜಿಯಾ ಮಾತನಾಡಿ ಕನ್ನಡ ನಾಡಿನಲ್ಲಿ ಕನ್ನಡ ಕಲಿಯುವ ಮತ್ತು ಕಲಿಸುವ ಕೆಲಸ ನಿರಂತರವಾಗಿ ನಡೆಯಬೇಕಾಗಿದೆ ಎಂದರು.

ಗಡಿ ಜಿಲ್ಲೆಗಳಲ್ಲಿ ಭಾಷಾಸೌಹಾರ್ದ ಮೂಡಿಸುವ ಸಲುವಾಗಿ ಏರ್ಪ ಡಿಸಿರುವ ಕನ್ನಡ ನುಡಿ ತೇರು ಜಾಗೃತಿ ಜಾಥಾಗೆ ಜಿಲ್ಲೆಯಲ್ಲಿ ಪಕ್ಷಾತೀತವಾಗಿ ಅಭೂತಪೂರ್ವ ಸ್ವಾಗತ ದೊರಕಿದೆ.

ಕನ್ನಡ ಪರ ಕಾರ್ಯಕ್ರಮಗಳನ್ನು ಮೂಡಿಸಲು ಇನ್ನಷ್ಟು ಉತ್ಸಾಹ ಮೂಡಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ಹೊನ್ನುಡಿ ಪ್ರಭಾಕರ್ ಮಾತ ನಾಡಿದರು. ಜಿಲ್ಲಾಧಿಕಾರಿ ಮನೋಜ್‌ಕುಮಾರ್ ಮೀನಾ, ತಾ.ಪಂ.ಅಧ್ಯಕ್ಷೆ            ಎನ್.ರಮಾದೇವಿ, ನಗರಸಭೆ ಆಯುಕ್ತೆ ಆರ್.ಶಾಲಿನಿ, ಮುಖ್ಯ ಮಂತ್ರಿ ಚಂದ್ರು ಪತ್ನಿ ಪದ್ಮಾ,ಬಿಇಒ ಶಿವಲಿಂಗಯ್ಯ, ಉಪವಿಭಾಗಾಧಿಕಾರಿ ಆರ್.ಎಸ್.ಪೆದ್ದಪ್ಪಯ್ಯ, ನುಡಿತೇರು ಸಂಚಾಲಕ ನಾಗರಾಜಮೂರ್ತಿ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಉಮಾಲಕ್ಷ್ಮಿ ವೇದಿಕೆಯಲ್ಲಿದ್ದರು.
ಡಾ.ರಂಗಾರೆಡ್ಡಿಕೋಡಿರಾಂಪುರ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT