ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ

Last Updated 20 ಜೂನ್ 2011, 9:35 IST
ಅಕ್ಷರ ಗಾತ್ರ

ಹೊನ್ನಾಳಿ: ಮಕ್ಕಳಿಗೆ ಶಿಕ್ಷಕರು ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ನೀಡಬೇಕು. ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ತಾಲ್ಲೂಕಿನ ಅರಬಗಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಐದು ಹೆಚ್ಚುವರಿ ಕೊಠಡಿಗಳಿಗೆ ಅವರು ಭಾನುವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಬೇಕಾಗಿದ್ದ 5 ಕೊಠಡಿಗಳಿಗೆ ಆರ್‌ಐಡಿಎಫ್ ಯೋಜನೆಯಡಿ ರೂ 25.70 ಲಕ್ಷ ಮಂಜೂರು ಮಾಡಲಾಗಿದೆ. ಸರ್ಕಾರಿ ಆಸ್ತಿ; ನಮ್ಮ ಆಸ್ತಿ ಎಂದು ತಿಳಿದು ಗ್ರಾಮಸ್ಥರು ಕಾಮಗಾರಿ ಮೇಲೆ ನಿಗಾವಹಿಸಬೇಕು ಎಂದು ಗ್ರಾಮಸ್ಥರಿಗೆ ಸೂಚಿಸಿದರು.

ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ಆವರಣ ಗೋಡೆ ನಿರ್ಮಿಸಲು ಗ್ರಾಮಸ್ಥರು ಮಂಡಿಸಿದ ಬೇಡಿಕೆಗೆ ರೇಣುಕಾಚಾರ್ಯ ಸಕಾರಾತ್ಮಕವಾಗಿ ಸ್ಪಂದಿಸಿದರು.

ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳಬೇಕು. ಶಿಕ್ಷಕರು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯತ್ತ ಗಮನಹರಿಸಬೇಕು ಎಂದು ಶಿಕ್ಷಕರಿಗೆ ಕರೆಯಿತ್ತರು.

ಅರಬಗಟ್ಟೆ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಸುವರ್ಣ ಗ್ರಾಮ ಯೋಜನೆ ಮಂಜೂರು ಮಾಡಲಾಗಿದ್ದು, ್ಙ 1ಕೋಟಿ ವೆಚ್ಚದಲ್ಲಿ ರಸ್ತೆ, ಚರಂಡಿ ಕಾಮಗಾರಿಗಳು ಪ್ರಗತಿಯಲ್ಲಿವೆ. ್ಙ 75ಲಕ್ಷ ವೆಚ್ಚದಲ್ಲಿ ನೂತನ ಆಸ್ಪತ್ರೆ ನಿರ್ಮಿಸಲಾಗಿದೆ. ಪಿಯು ಕಾಲೇಜು ಕಟ್ಟಡ ನಿರ್ಮಾಣಕ್ಕೆ ್ಙ 24ಲಕ್ಷ, ಪ್ರಾಥಮಿಕ ಶಾಲಾ ಕಟ್ಟಡಕ್ಕೆ ್ಙ 7.60ಲಕ್ಷ, ಹೆಚ್ಚುವರಿ ಕೊಠಡಿಗೆ ್ಙ  5ಲಕ್ಷ, ಹೈಟೆಕ್ ಶೌಚಾಲಯಕ್ಕೆ ್ಙ 1.80ಲಕ್ಷ, ಪರಿಶಿಷ್ಟ ಜಾತಿ ಕಾಲೊನಿ ಅಭಿವೃದ್ಧಿಗೆ ್ಙ 30ಲಕ್ಷ, ನಾಲಾ ಕಾಮಗಾರಿಗೆ ್ಙ 9ಲಕ್ಷ, ಕೆರೆ ಹೂಳೆತ್ತುವ ಕಾಮಗಾರಿಗೆ ್ಙ 9ಲಕ್ಷ, ಮಾದನಬಾವಿ ಸಂಪರ್ಕ ರಸ್ತೆ ಅಭಿವೃದ್ಧಿಗೆ ್ಙ 5ಲಕ್ಷ ಹೀಗೆ ಗ್ರಾಮದ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಲಾಗಿದೆ ಎಂದು ಅವರು ತಿಳಿಸಿದರು.

ಅರಬಗಟ್ಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಸಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಮಹೇಶ್ವರಪ್ಪ, ತಾ.ಪಂ. ಸದಸ್ಯ ಮಾದನಬಾವಿ ಆನಂದಪ್ಪ, ಮುಖ್ಯೋಪಾಧ್ಯಾಯ ಪ್ರೇಮ್‌ಕುಮಾರ್, ಉಮೇಶ್, ರಮೇಶ್, ಕರಿಬಸಪ್ಪ, ಗ್ರಾ.ಪಂ. ಸದಸ್ಯರು, ಎಸ್‌ಡಿಎಂಸಿ ಸದಸ್ಯರು, ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT