ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿ: ಅರ್ಜಿ ಆಹ್ವಾನ

Last Updated 4 ಜುಲೈ 2013, 10:25 IST
ಅಕ್ಷರ ಗಾತ್ರ

ಉಡುಪಿ: ಶಿಕ್ಷಣ, ಕಲೆ, ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಮಟ್ಟದ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಪ್ರಶಸ್ತಿ ಒಂದು ಚಿನ್ನದ ಪದಕ 20ಸಾವಿರ ರೂಪಾಯಿ ನಗದು, ಪ್ರಶಸ್ತಿ ಪತ್ರ ಹಾಗೂ 35 ಬೆಳ್ಳಿ ಪದಕ (ಪ್ರತಿ ರಾಜ್ಯ- ಕೇಂದ್ರಾಡಳಿತ ಪ್ರದೇಶಕ್ಕೆ ಒಂದು ಬೆಳ್ಳಿ ಪದಕ) 10ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

ಮೇಲ್ಕಂಡ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವ 4 ರಿಂದ 15 ವರ್ಷದೊಳಗಿನ ಅಂದರೆ ದಿನಾಂಕ 1-8-1998 ರಿಂದ ಹಾಗೂ ನಂತರ ಹುಟ್ಟಿದ ಮಕ್ಕಳನ್ನು 2013ನೇ ವರ್ಷಕ್ಕೆ ಆಯ್ಕೆ ಮಾಡಲಾಗುವುದು. 

ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ಶಿಕ್ಷಣ, ಕಲೆ, ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಯನ್ನು ಅಸಾಧಾರಣವೆಂದು ಗುರುತಿಸಲು ಅವರ ಸಾಧನೆಯ ಬಗ್ಗೆ ದಿನಪತ್ರಿಕೆಗಳಲ್ಲಿ ವರದಿಯಾಗಿರಬೇಕು. ಅಥವಾ ಸಂಬಂದಪಟ್ಟ ಕ್ಷೇತ್ರದ ತಜ್ಞರಿಂದ ಪರೀಕ್ಷಿಸಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರಪತ್ರಾಂಕಿತ ಅಧಿಕಾರಿಗಳಿಂಧ ದೃಢೀಕರಿಸಿ ಸಲ್ಲಿಸಬೇಕು.

2013 ನೇ ವರ್ಷದ ಪ್ರಶಸ್ತಿಗೆ ನಿಗದಿಪಡಿಸಿರುವ ಅರ್ಜಿ ನಮೂನೆಯನ್ನು, ಉಪ ನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಚೇರಿಯಿಂದ ಪಡೆದು ಆಂಗ್ಲ ಭಾಷೆಯಲ್ಲಿ ದ್ವಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 15ರೊಳಗೆ ಒಳಗೆ ಜಿಲ್ಲಾ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವದ್ಧಿ ಇಲಾಖೆ, ಮಣಿಪಾಲ ವಿಳಾಸಕ್ಕೆ ಕಳುಹಿಸಬಹುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0820-2574902 ಸಂಪರ್ಕಿಸಬಹುದು ಎಂದು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವದ್ಧಿ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT