ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಜ್ಜಿಗೆ ಕುಡಿಯಿರಿ ತಣ್ಣಗೆ

Last Updated 14 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಮಜ್ಜಿಗೆ ಅಂದ ತಕ್ಷಣ ಮೂಗುಮುರಿಯುವವರೇ ಅಧಿಕ ಮಂದಿ. ಉರಿಬಿಸಿಲಿನಲ್ಲಿ ಕುಡಿಯಲು ಇಷ್ಟಪಡುವುದನ್ನು ಬಿಟ್ಟರೆ ಈಗಿನ ಯುವಜನರು, ಮಕ್ಕಳು ಮಜ್ಜಿಗೆ ಎಂದರೆ ಮಾರುದೂರ ಹೋಗುತ್ತಾರೆ. ಅದು ಹುಳಿಯಾಗಿರುತ್ತದೆ, ಒಂಥರಾ ವಾಸನೆ ಬರುತ್ತದೆ ಎನ್ನುತ್ತಾ ಅದನ್ನು ಕುಡಿಯಲು ಹಿಂದೇಟು ಹಾಕುತ್ತಾರೆ. ಗಟ್ಟಿ ಮೊಸರಾದರೆ ಅನ್ನದ ಜೊತೆ ಕಲಸಿ ತಿನ್ನಬಹುದು, ಮಜ್ಜಿಗೆ ಹೇಗೆ ಅನ್ನದ ಜೊತೆ ಸೆಟ್ ಆಗುತ್ತೆ ಎಂದು ತಾತ್ಸಾರ ಮಾಡುತ್ತಾರೆ.

ಆದರೆ ಆರೋಗ್ಯಕ್ಕೆ ಮಜ್ಜಿಗೆ ತುಂಬಾ ಉಪಕಾರಿ.

- ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಗಂಟೆಗೊಮ್ಮೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಸಿತವಾಗುತ್ತದೆ.

- ಅಜೀರ್ಣ, ಹೊಟ್ಟೆನೋವು ಕಂಡುಬಂದರೆ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.
- ಮಜ್ಜಿಗೆ ಉತ್ತಮ ಜೀರ್ಣಕಾರಿ ದ್ರವ ಪದಾರ್ಥ. ಮನೆಯಲ್ಲಿ ಹಬ್ಬಹರಿದಿನಗಳ ಸಂದರ್ಭದಲ್ಲಿ, ಯಾವುದೋ ಸಮಾರಂಭಕ್ಕೆ ಹೋಗಿ ಊಟ ಮಾಡಿ ಹೊಟ್ಟೆ ಭಾರವೆನಿಸುತ್ತಿದ್ದರೆ ಮಜ್ಜಿಗೆಗೆ ಉಪ್ಪು, ಹಸಿಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು ಸೇರಿಸಿ ಕುಡಿದರೆ ತಿಂದ ಆಹಾರ ಜೀರ್ಣವಾಗುತ್ತದೆ.
- ಊಟದ ಜೊತೆ ಉಪ್ಪಿನಕಾಯಿ ಇದ್ದಂತೆ ಕೊನೆಯಲ್ಲಿ ಮಜ್ಜಿಗೆ ಸೇರಿಸಿ ಊಟ ಮಾಡಿದರೆ ಹೊಟ್ಟೆಗೂ ಸುಖಕರ, ಊಟವೂ ಪೂರ್ಣವಾಗುತ್ತದೆ.
- ಮಜ್ಜಿಗೆ ದೇಹದಲ್ಲಿರುವ ಉಷ್ಣತೆಯನ್ನು ಕಡಿಮೆ ಮಾಡಿ ತಂಪು ನೀಡುತ್ತದೆ. ಅದಕ್ಕೆ ಬೇಸಿಗೆ ಕಾಲದಲ್ಲಿ ಎಲ್ಲರೂ ಮಜ್ಜಿಗೆ ನೀರಿಗೆ ಮೊರೆ ಹೋಗುತ್ತಾರೆ.
- ಮೊಸರಿನಲ್ಲಿ ಅಧಿಕ ಪ್ರಮಾಣದಲ್ಲಿ ಕೊಬ್ಬಿನ ಅಂಶ ಇರುತ್ತದೆ. ಆದರೆ ಮೊಸರಿನಿಂದ ಬೆಣ್ಣೆ ತೆಗೆದು ಮಜ್ಜಿಗೆ ಮಾಡುವುದರಿಂದ ಕ್ಯಾಲೊರಿ, ಕೊಬ್ಬಿನ ಅಂಶ ತೀರಾ ಕಡಿಮೆ.
- ಸಕ್ಕರೆ ಕಾಯಿಲೆ ಇರುವವರಿಗೂ ಮಜ್ಜಿಗೆ ನೀರು ಉತ್ತಮ. ದಿನದಲ್ಲಿ ನಾಲ್ಕೈದು ಲೋಟ ಮಜ್ಜಿಗೆ ನೀರು ಕುಡಿಯುತ್ತಿದ್ದರೆ ದೇಹದ ಸ್ಥಿತಿ ಉತ್ತಮವಾಗಿರುತ್ತದೆ.
- ಡಯಟ್ ಮಾಡುವವರು ಹಣ್ಣು, ತರಕಾರಿಗಳ ಜೊತೆ ಮಜ್ಜಿಗೆಯನ್ನು ಸೇವಿಸಬೇಕು.

ಮಜ್ಜಿಗೆ ನೀರಿನಲ್ಲಿ ಹೇರಳವಾಗಿ ಪೊಟಾಷಿಯಂ, ಕ್ಯಾಲ್ಸಿಯಂ, ಫಾಸ್ಫರಸ್ ಹಾಗೂ ವಿಟಮಿನ್ ಬಿ12 ಇರುತ್ತದೆ.
ತಲೆಹೊಟ್ಟಿನ ಸಮಸ್ಯೆ ಇರುವವರು ಹುಳಿ ಮಜ್ಜಿಗೆಯನ್ನು ಕೂದಲಿನ ಬುಡಕ್ಕೆ ಸವರಿ ಎರಡು ಗಂಟೆ ಕಳೆದು ಸ್ನಾನ ಮಾಡಬೇಕು. ಹೀಗೆ ನಾಲ್ಕೈದು ಸಲ ಸ್ನಾನ ಮಾಡಿದರೆ ತಲೆಹೊಟ್ಟು ನಿವಾರಣೆಯಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT