ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ ದಸರಾ ಯಶಸ್ವಿಗೆ ಮನವಿ

Last Updated 20 ಅಕ್ಟೋಬರ್ 2012, 6:05 IST
ಅಕ್ಷರ ಗಾತ್ರ

ಮಡಿಕೇರಿ: ರಾಜರ ಕಾಲದಿಂದ ಆಚರಿಸಿಕೊಂಡು ಬರಲಾಗುತ್ತಿರುವ ಮಡಿಕೇರಿ ದಸರಾ ಜನೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಎಲ್ಲರೂ ಶ್ರಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಅವರು ತಿಳಿಸಿದರು.

ನಗರದ ವಿಧಾನ ಸಭಾಂಗಣದಲ್ಲಿ ಶುಕ್ರವಾರ ವಿಧಾನ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಅವರ ಉಪಸ್ಥಿತಿಯಲ್ಲಿ ನಡೆದ ದಸರಾ ಪೂರ್ವ ಸಿದ್ಧತಾ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರ ಮಡಿಕೇರಿ ದಸರಾಕ್ಕೆ 50 ಲಕ್ಷ ರೂಪಾಯಿ, ಗೋಣಿಕೊಪ್ಪ ದಸರಾಗೆ 25ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದು, ಅನುದಾನವನ್ನು ಸಮರ್ಪಕವಾಗಿ ಬಳಸಬೇಕು ಎಂದರು.

ದಸರಾ ಹಿನ್ನೆಲೆಯಲ್ಲಿ ಮಡಿಕೇರಿ ನಗರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು ಸ್ವಚ್ಛತೆ ಕಾಪಾಡಬೇಕು. ನಗರದ ಕೋಟೆ ಆವರಣವನ್ನು ಶುಚಿಗೊಳಿಸಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕ್ರಮವಹಿಸುವಂತೆ ಸಚಿವರು ಸೂಚನೆ ನೀಡಿದರು.    

ಹೋಟೆಲ್‌ಗಳಲ್ಲಿ ಶುಚಿತ್ವ ಕಾಪಾ ಡುವ ಜೊತೆಗೆ ದರಪಟ್ಟಿ ಅಳವಡಿಸಬೇ ಕು. ಪ್ರವಾಸಿಗರಿಗೆ ಸಮರ್ಪಕ ಮಾಹಿತಿ ಒದಗಿಸಲು ಪೊಲೀಸ್ ಇಲಾಖೆ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.
 ನಗರದ ಸಾರ್ವಜನಿಕ ಕಟ್ಟಡಗಳಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡಬೇಕು. ದಶಮಂಟಪ ಹಾದು ಹೋಗುವ ರಸ್ತೆಗಳಲ್ಲಿ ಗುಂಡಿ ಮುಚ್ಚುವ ಕಾರ್ಯ ವನ್ನು ಪೂರ್ಣಗೊಳಿಸಬೇಕು. ದಿನದ 24 ಗಂಟೆಯೂ ಆರೋಗ್ಯ ಸೇವೆ ಕಲ್ಪಿಸಲು ಸಂಬಂಧ ಪಟ್ಟ ಇಲಾಖೆ ಅಧಿ ಕಾರಿಗಳು ಶ್ರಮಿಸುವಂತೆ ಅವರು ನಿರ್ದೇ ಶನ ನೀಡಿದರು.

ದಸರಾಗೆ ಸುಮಾರು 2 ಲಕ್ಷ ಜನರು ಆಗಮಿಸುವ ಸಾಧ್ಯತೆಯಿದ್ದು ಬಿಗಿ ಪೊಲೀಸ್ ಬಂದೋ ಬಸ್ತ್ ಕಲ್ಪಿಸ ಬೇಕು. ದಸರಾವನ್ನು ಶಾಂತಿಯುತವಾಗಿ ಆಚರಣೆ ಮಾಡಲು ಎಲ್ಲರೂ ಶ್ರಮಿಸು ವಂತೆ ಅವರು ಕೋರಿದರು.
ವಿಧಾನ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ಇತಿಹಾಸ ಪ್ರಸಿದ್ಧ ದಸರಾವನ್ನು ಅರ್ಥ ಪೂರ್ಣವಾಗಿ ಆಚರಿಸಲು ಎಲ್ಲರೂ ಶ್ರಮಿಸುವಂತೆ ಅವರು ಸಲಹೆ ಮಾಡಿ ದರು. ಮಡಿಕೇರಿ ನಗರದಲ್ಲಿ ಮಳೆ ಬಂದರೆ ನೀರು ಚರಂಡಿಗೆ ಹೋಗುವಂತೆ ವ್ಯವಸ್ಥೆ ಮಾಡಬೇಕು ಎಂದು ಅವರು ಸೂಚನೆ ನೀಡಿದರು.

ನಗರಸಭಾ ಅಧ್ಯಕ್ಷ ಎಚ್.ಎಂ.ನಂದ ಕುಮಾರ್ ಮತ್ತು ಆಯುಕ್ತ  ಎನ್.ಎಂ.ಶಶಿಕುಮಾರ್ ಅವರು ದಸರಾ ಪೂರ್ವ ತಯಾರಿ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಅಣ್ಣಿ ಗೇರಿ ಅವರು ದಸರಾ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಎನ್.ವಿ.ಪ್ರಸಾದ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಬಿ.ಅಂಜನಪ್ಪ, ದಸರಾ ಗೌರವ ಕಾರ್ಯಾಧ್ಯಕ್ಷ ರಾಬಿನ್ ದೇವಯ್ಯ ಮತ್ತಿತರರು ಹಾಜರಿದ್ದರು.  ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರಿಧರ್ ನೆಲ್ಲಿತ್ತಾಯ ಅವರು ಹಲವು ಸಲಹೆಗಳನ್ನು ನೀಡಿದರು. ಉಪ ಸಮಿತಿ ಅಧ್ಯಕ್ಷರು ತಮ್ಮ ವ್ಯಾಪ್ತಿಯ ದಸರಾ ತಯಾರಿ ಬಗ್ಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT