ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ: ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

Last Updated 21 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮಣಿಪುರದಲ್ಲಿ ಮೂರು ತಿಂಗಳಿಂದ ಆರ್ಥಿಕ ದಿಗ್ಬಂಧನ ಉಂಟಾಗಿದ್ದು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಬಿಜೆಪಿ ನಿಯೋಗ ಪ್ರಧಾನ ಮಂತ್ರಿಯನ್ನು ಶುಕ್ರವಾರ ಭೇಟಿ ಮಾಡಿ ಒತ್ತಾಯಿಸಿದೆ.

ಈ ನಿಯೋಗದಲ್ಲಿ ಲೋಕಸಭೆಯ ವಿರೋಧಪಕ್ಷದ ನಾಯಕಿ ಸುಷ್ಮ ಸ್ವರಾಜ್, ಅರುಣ್ ಜೇಟ್ಲಿ ಮತ್ತು ಪಕ್ಷದ ಅಧ್ಯಕ್ಷ ನಿತಿನ್ ಗಡ್ಕರಿ ಸೇರಿದಂತೆ ಮಣಿಪುರದ ಇತರ ಪಕ್ಷದ ಮುಖಂಡರು   ಇದ್ದರು. ರಾಜ್ಯದಲ್ಲಿ ಪರಿಸ್ಥಿತಿ  ಹದಗೆಟ್ಟಿದೆ ಎಂದು ಅವರು ಪ್ರಧಾನಿಗೆ ತಿಳಿಸಿದರು. `ಮಣಿಪುರದ ಪರಿಸ್ಥಿತಿ ಬಗ್ಗೆ ಪ್ರಧಾನಿಗೆ ವಿವರಿಸಿದ ಅವರು ಅಗತ್ಯ ವಸ್ತುಗಳ ದರ ವಿಪರೀತ ಏರಿದೆ. ಪೆಟ್ರೊಲ್ ಮತ್ತು ಡೀಸಲ್  ಮನಸ್ಸಿಗೆ ಬಂದ ಬೆಲೆಗೆ ಮಾರಲಾಗುತ್ತಿದೆ . ತರಕಾರಿ ಬೆಲೆ ಏರಿದ್ದು ಶ್ರೀಮಂತರು ಸಹ ಅದನ್ನು ಕೊಳ್ಳುವಂತಿಲ್ಲ~ ಎಂದು ಹೇಳಿರುವುದಾಗಿ ವರದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT