ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ

Last Updated 9 ಏಪ್ರಿಲ್ 2013, 9:23 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ವಿಧಾನಸಭೆ ಚುನಾವಣೆ ಮತದಾನಕ್ಕೆ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತವು ಹಲವು ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಸೋಮವಾರ ಕೆಎಸ್‌ಆರ್‌ಟಿಸಿ ಬಸ್ ಮತ್ತು ಆಟೊರಿಕ್ಷಾಗಳ ನೆರವಿನಿಂದ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ನಗರದ ಹಳೆಯ ಬಸ್ ನಿಲ್ದಾಣದ ಬಳಿ ಸೋಮವಾರ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ಎಸ್.ಶೇಖರಪ್ಪ ಮಾತನಾಡಿ, `ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಲವು ರೀತಿಯ ಅಭಿಯಾನ ಕಾರ್ಯಕ್ರಮಗಳನ್ನು ಹಂತಹಂತವಾಗಿ ಕೈಗೊಳ್ಳಲಾಗುತ್ತಿದೆ' ಎಂದರು.

`ರಾಜ್ಯ ಚುನಾವಣಾ ಆಯೋಗವು ಪ್ರಸಕ್ತ ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ತೀರ್ಮಾನಿಸಿದ್ದು, ಅಗತ್ಯ ಸಿದ್ಧತಾ ಕಾರ್ಯಗಳನ್ನು ಕೈಗೊಂಡಿದೆ. ಮತದಾನದ ಪ್ರಮಾಣವು ಹೆಚ್ಚಳವಾಗಬೇಕು ಎಂಬ ದೃಷ್ಟಿಯಿಂದ ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ' ಎಂದು ಅವರು ತಿಳಿಸಿದರು.

`ಕೆಎಸ್‌ಆರ್‌ಟಿಸಿ ಬಸ್, ಆಟೊರಿಕ್ಷಾ ಮತ್ತು ಸರ್ಕಾರದ ಇತರ ವಾಹನಗಳ ಮೂಲಕ ಅಭಿಯಾನ ಕೈಗೊಳ್ಳಲಾಗುವುದು. ಖ್ಯಾತನಾಮರಾದ ಎ.ಪಿ.ಜೆ.ಅಬ್ದುಲ್ ಕಲಾಂ, ಮಹೇಂದ್ರ ಸಿಂಗ್ ದೋನಿ, ಪುನೀತ್‌ರಾಜ್‌ಕುಮಾರ್, ಐಂದ್ರಿತಾ ರೇ ಅವರ ಮತದಾನ ಸಂದೇಶವುಳ್ಳ ಭಿತ್ತಿಪತ್ರಗಳ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲಾಗುವುದು. ಸಂದೇಶವುಳ್ಳ ಭಿತ್ತಿಪತ್ರಗಳನ್ನು ವಾಹನಗಳ ಮೇಲೆ ಅಂಟಿಸಲಾಗುವುದು. ಆ ವಾಹನಗಳು ಸಂಚರಿಸಿದ ಕಡೆಯಲ್ಲೆಲ್ಲ, ಮತದಾನದ ಸಂದೇಶ ಜನರಿಗೆ ತಲುಪಲಿದೆ. ಈ ಅಭಿಯಾನವನ್ನು ಜಿಲ್ಲೆಯಾದ್ಯಂತ ವಿಸ್ತರಿಸಲಾಗುವುದು' ಎಂದು ಅವರು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸತ್ಯಭಾಮಾ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕಿ ಡಾ.ಕೆ.ಎನ್.ಕವನಾ, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಬಿ.ವೆಂಕಟರಮಣಪ್ಪ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT