ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಮತದಾನ ಹೆಚ್ಚಳ ಎಲ್ಲರ ಕರ್ತವ್ಯ'

ಜಿಲ್ಲೆಯಲ್ಲಿ 51 ಸಾವಿರ ಹೊಸ ಮತದಾರರು
Last Updated 20 ಏಪ್ರಿಲ್ 2013, 10:30 IST
ಅಕ್ಷರ ಗಾತ್ರ

ವಿಜಾಪುರ: `ರಾಜ್ಯದಲ್ಲಿ ಇತ್ತೀಚಿನ ಚುನಾವಣೆಗಳಲ್ಲಿ ಮತದಾನ ಪ್ರಮಾಣ ಇಳಿಮುಖವಾಗುತ್ತಿದೆ. ಮತದಾನದ ಪ್ರಮಾಣ ಹೆಚ್ಚಳಕ್ಕೆ ಎಲ್ಲರೂ ಬದ್ಧತೆಯಿಂದ ಕಾರ್ಯನಿರ್ವಹಿಸ ಬೇಕು' ಎಂದು ವಿಜಾಪುರ ಮತಕ್ಷೇತ್ರದ ಕೇಂದ್ರ ಚುನಾವಣಾ ಸಾಮಾನ್ಯ ವೀಕ್ಷಕ ರಾಮಕೃಷ್ಣನ್ ಕರೆ ನೀಡಿದರು.

ಶುಕ್ರವಾರ ಇಲ್ಲಿ  ಸೆಕ್ಟರ್ ಅಧಿಕಾರಿ ಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಪ್ರಚಾರ ಸಾಮಗ್ರಿ ಬಿಡುಗಡೆಗೊಳಿಸಿ ಮಾತನಾಡಿದರು.

ಕೇರಳ, ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಶೇ 70ರಿಂದ 80ರಷ್ಟು ಮತದಾನ ವಾಗಿದ್ದರೆ ಕರ್ನಾಟಕದ 2008ರ ಚುನಾವಣೆಯಲ್ಲಿ ಶೇ 60ರಷ್ಟು ಮಾತ್ರ ಮತದಾನವಾಗಿದೆ. ಪ್ರಸಕ್ತ ಚುನಾವಣೆಯಲ್ಲಿ ಕನಿಷ್ಠ ಶೇ.80ರಷ್ಟು ಮತದಾನವಾಗಬೇಕು. ಮುಕ್ತ ಹಾಗೂ ನಿರ್ಭಿಡೆಯಿಂದ ಮತ ಚಲಾಯಿಸುವ ಕುರಿತಂತೆ ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.

ಜಿಲ್ಲಾ ಚುನಾವಣಾಧಿಕಾರಿ ಶಿವಯೊಗಿ ಕಳಸದ, ಚುನಾವಣೆಗಳು ಕೇವಲ ಸ್ಪರ್ಧಿಸಿದವರಿಗೆ ಮಾತ್ರ ಸೀಮಿತವಾಗಿಲ್ಲ. ಎಲ್ಲ ಮತದಾರರೂ ಮತದಾನದಲ್ಲಿ ಭಾಗವಹಿಸಬೇಕಾಗಿದೆ.  ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿ ಸುವ ಎಲ್ಲ ಅಧಿಕಾರಿ, ಸಿಬ್ಬಂದಿ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಮತದಾರರ ಜಾಗೃತಿಗೆ ಮುಂದಾಗಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಹೊಸದಾಗಿ 51 ಸಾವಿರ ಮತದಾರರು ನೋಂದಾಯಿಸಿಕೊಂ ಡಿದ್ದಾರೆ. ಈ ಚುನಾವಣೆಯಲ್ಲಿ 15 ಲಕ್ಷಕ್ಕೂ ಹೆಚ್ಚು ಮತದಾರರು ಭಾಗವ ಹಿಸಲಿದ್ದಾರೆ. 1799 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 10 ಸಾವಿರ ಸಿಬ್ಬಂದಿ ನೇರವಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಗುತ್ತಿ ಜಂಬುನಾಥ್, ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಶೇ.20ರಷ್ಟು ಹೆಚ್ಚಳವಾಗುವ ಗುರಿಯೊಂದಿಗೆ ವಿವಿಧ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜೆ.ಸಿದ್ದಪ್ಪ,  ವಿವಿಧ ಮತಕ್ಷೇತ್ರದ ಚುನಾವಣಾ ನಿರ್ವಾಚಣಾಧಿಕಾರಿಗಳು, ಸೆಕ್ಟರ್ ಆಫಿಸರ್‌ಗಳು ಭಾಗವಹಿಸಿದ್ದರು. ತಹಶೀಲ್ದಾರ್ ಔದ್ರಾಮ್ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT