ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪಟ್ಟಿ ಪರಿಷ್ಕರಣೆ ಆಂದೋಲನ

Last Updated 21 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಈ ತಿಂಗಳ 13ರಿಂದ ಆರಂಭಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ ಆಂದೋಲನ 31ರವರೆಗೆ ನಡೆಯಲಿದೆ.

ವಿಧಾನಸಭಾ ಕ್ಷೇತ್ರವಾರು ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗಾಗಿ ಪಾಲಿಕೆಯು ನಗರದ 198 ವಾರ್ಡ್‌ಗಳಲ್ಲಿ ಒಂದೊಂದು ಕೌಂಟರ್‌ಗಳನ್ನು ತೆರೆದಿದೆ. ಮತದಾರರ ಪಟ್ಟಿಯನ್ನು ಸಾರ್ವಜನಿಕರ ಅವಗಾಹನೆಗಾಗಿ ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿಗಳು/ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿ ಹಾಗೂ ಅವರ ವ್ಯಾಪ್ತಿಗೆ ಬರುವ ಸೇವಾ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.

ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಭಾವಚಿತ್ರವಿಲ್ಲದಿದ್ದರೆ ಎರಡು ಬಣ್ಣದ ಭಾವಚಿತ್ರಗಳನ್ನು ನೀಡಬೇಕಾಗುತ್ತದೆ. ಒಂದು ವೇಳೆ ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಭಾವಚಿತ್ರ ನೀಡದ ಪಕ್ಷದಲ್ಲಿ ಅಂತಹವರ ಹೆಸರನ್ನು ಮತದಾರರ ಪಟ್ಟಿಯಿಂದ ನಿಯಮಾನುಸಾರ ತೆಗೆದು ಹಾಕಲು ಕ್ರಮ ಜರುಗಿಸಲಾಗುತ್ತದೆ.

2012ರ ಜನವರಿ 1ಕ್ಕೆ 18 ವರ್ಷ ತುಂಬುವ ಯುವಕ- ಯುವತಿಯರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿಕೊಳ್ಳಲು ಅವಕಾಶವಿದೆ.

ಸಂಪರ್ಕಕ್ಕೆ ಮನವಿ: ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು, ತೆಗೆದು ಹಾಕಲು, ತಿದ್ದುಪಡಿ ಮಾಡಲು ಅಥವಾ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ವರ್ಗಾಯಿಸುವ ಸಂಬಂಧ ಹೆಚ್ಚಿನ ಮಾಹಿತಿಗೆ ಸಮೀಪದ ಪಾಲಿಕೆಯ ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಬಿಬಿಎಂಪಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT