ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪಟ್ಟಿ: ಹೆಸರು ಸೇರಿಸಲು 31 ಕೊನೆ ದಿನ

Last Updated 5 ಅಕ್ಟೋಬರ್ 2012, 6:05 IST
ಅಕ್ಷರ ಗಾತ್ರ

ಬಳ್ಳಾರಿ: ಜಿಲ್ಲೆಯ ಬಳ್ಳಾರಿ ಹಾಗೂ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಇನ್ನುಳಿದ ಎಲ್ಲ ವಿಧಾನಸಭೆ ಕ್ಷೇತ್ರಗಳ ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, 2013ರ ಜನವರಿ 1ಕ್ಕೆ 18 ವರ್ಷ ತುಂಬುವವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಅಕ್ಟೋಬರ್ 31ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ತಿಳಿಸಿದ್ದಾರೆ.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ, ನಮೂನೆ - 6ರಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ತಂದೆ, ತಾಯಿಯ ಎಪಿಕ್ ಕಾರ್ಡ್ ಸಂಖ್ಯೆಯನ್ನು ತಪ್ಪದೆ ನಮೂದಿಸಬೇಕು. ಮತದಾರರ ಪಟ್ಟಿಯಲ್ಲಿ ಈಗಾಗಲೇ ಹೆಸರು ಇದ್ದು, ಎಪಿಕ್ ಕಾರ್ಡ್ ಹೊಂದಿದವರ ವಾಸಸ್ಥಳ ಬದಲಾಯಿಸಿದ್ದಲ್ಲಿ, ನಮೂನೆ- 6ರಲ್ಲಿ ಅರ್ಜಿ ಸಲ್ಲಿಸಿ, ತಾವು ಈ ಹಿಂದೆ ಹೊಂದಿದ ಎಪಿಕ್ ಕಾರ್ಡ್ ಸಂಖ್ಯೆಯನ್ನು ತಪ್ಪದೆ ಸರಿಯಾಗಿ ನಮೂದಿಸಬೇಕು.

ಮತದಾರರ ಹೆಸರು ಸೇರ್ಪಡೆಗೆ ನಮೂನೆ- 6ರಲ್ಲಿ,  ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕಲು ನಮೂನೆ 7ರಲ್ಲಿ, ಮತದಾರರ ಪಟ್ಟಿಯಲ್ಲಿನ ಮಾಹಿತಿ ತಿದ್ದುಪಡಿಗೆ ನಮೂನೆ- 8ರಲ್ಲಿ ವಿಧಾನಸಭಾ ಕ್ಷೇತ್ರದ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ವರ್ಗಾಯಿಸಲು ನಮೂನೆ- 8-ಎ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ಅಕ್ಟೋಬರ್ 31ರೊಳಗಾಗಿ ಸಂಬಂಧಿಸಿದ ಮತಗಟ್ಟೆ ಅಧಿಕಾರಿ (ಬಿಎಲ್‌ಓ) ಷರಾದೊಡನೆ ಸಂಬಂಧಿಸಿದ ತಾಲ್ಲೂಕು ಕಚೇರಿಗೆ ಸಲ್ಲಿಸಿ ಸ್ವೀಕೃತಿ ಪಡೆಯಬೇಕು.

ಅರ್ಜಿಯಲ್ಲಿ ತಪ್ಪದೆ ದೂರವಾಣಿ ಸಂಖ್ಯೆ ನಮೂದಿಸಬೇಕು. ಯುವ ಮತದಾರರ ಹೆಸರನ್ನು ಸೇರಿಸಲು 2012ರ ಜನವರಿ 1ರಂದು ಜರುಗಿದ ಜಿಲ್ಲಾ ಮಟ್ಟದ ಸಭೆಯಲ್ಲಿ ನಿರ್ಣಯಿಸಿದಂತೆ ವಿದ್ಯಾರ್ಥಿಗಳು ತಮ್ಮ ಕಾಲೇಜು/ ಹಾಸ್ಟೆಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT