ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪಟ್ಟಿಗೆ ಹೆಸರು ದಾಖಲಿಸಲು ಕರೆ

Last Updated 6 ಅಕ್ಟೋಬರ್ 2012, 9:50 IST
ಅಕ್ಷರ ಗಾತ್ರ

ಕೊಲಾರ: ವಿಧಾನಸಭಾ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಶುರುವಾಗಿದ್ದು, 2013ರ ಜ.1ಕ್ಕೆ 18 ವರ್ಷ ವಯಸ್ಸಾಗುವ ಎಲ್ಲ ಯುವಜನವರು ಮತದಾರರ ಪಟ್ಟಿಯಲ್ಲಿ ಮೊದಲ ಬಾರಿಗೆ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಡಿ.ಎಸ್.ವಿಶ್ವನಾಥ್ ತಿಳಿಸಿದ್ದಾರೆ.

ನಗರದ ತಮ್ಮ ಕಚೇರಿಯಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ಅ.1 ರಿಂದ 31 ರವರೆಗೆ ಮತದಾರರ ಸೇರ್ಪಡೆ, ತಿದ್ದುಪಡಿಗಳ ಅರ್ಜಿಗಳನ್ನು ಸ್ವೀಕರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಮತ್ತು ಯುವಜನರಲ್ಲಿ ಈ ಕುರಿತು ಹೆಚ್ಚಿನ ಅರಿವು ಮೂಡಿಸಲು ಅಧಿಕಾರಿ-ಸಿಬ್ಬಂದಿ ಶ್ರಮಿಸಬೇಕು ಎಂದರು.


ನಂತರ ಸುದ್ದಿಗಾರರೊಡನೆ ಮಾತನಾಡಿದ ಅವರು, ಭಾವಚಿತ್ರವಿರುವ ಕರಡು ಮತದಾರರ ಪಟ್ಟಿಯನ್ನು ಎಲ್ಲ ತಾಲ್ಲೂಕುಗಳ ಮತಗಟ್ಟೆಗಳಲ್ಲಿ ಈಗಾಗಲೇ ಪ್ರಚುರಪಡಿಸಲಾಗಿದೆ.  ಸಾರ್ವಜನಿಕ ಮತದಾರರು ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳನ್ನು ನಮೂನೆ 6, 7, 8 ಮತ್ತು 8ಎ ಗಳಲ್ಲಿ ಮತಗಟ್ಟೆಗಳ ನಿರ್ಧಿಷ್ಟಾಧಿಕಾರಿಗಳಿಗೆ ಅ.31ರ ಒಳಗೆ ಸಲ್ಲಿಸಬೇಕು ಎಂದರು.

ಗ್ರಾಮ ಸಭೆಗಳಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮೀಣ ಕಲ್ಯಾಣ ಸಂಘಗಳಲ್ಲಿ ಮತದಾರರ ಪಟ್ಟಿಯ ಮತದಾರರ ಹೆಸರುಗಳನ್ನು ಓದುವ ಕಾರ್ಯಕ್ರಮ ಅ.6 ಮತ್ತು 9ರಂದು ನಡೆಯಲಿದೆ. ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳನ್ನು ರಾಜಕೀಯ ಪಕ್ಷಗಳಿಗೆ ಸಂಬಂಧಪಟ್ಟ ಮತಗಟ್ಟೆ ಮಟ್ಟದ ಏಜೆಂಟರುಗಳೊಡನೆ ಮತಗಟ್ಟೆಗಳಲ್ಲಿ ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳನ್ನು ಅ.7, 14 ಮತ್ತು 21 ರಂದು ಸ್ವೀಕರಿಸಲಾಗುವುದು ಎಂದರು.

2013ರ ವೆುೀ 1ರಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು. ಜಿಲ್ಲೆಯ ಎಲ್ಲ 1509 ಮತಗಟ್ಟೆಗಳಲ್ಲಿ ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳನ್ನು ಸ್ವೀಕರಿಸಲು ಅಧಿಕಾರಿಗಳನ್ನು ನೇಮಿಸಲಾಗಿದೆ.

ಯುವ ಮತದಾರರು ಹದಿನೈದು ವರ್ಷ ಪೂರ್ಣಗೊಂಡಿರುವವರನ್ನು ಮತದಾರರ ಪಟ್ಟಿಗೆ ಸೇರಿಸಿಕೊಳ್ಳಲು ಎಲ್ಲ ಕಾಲೇಜುಗಳು ಹಾಗೂ ಸ್ನಾತಕೋತ್ತರ ಕೇಂದ್ರಗಳು ಮತ್ತು ಕಾನೂನು ಕಾಲೇಜುಗಳಿಗೆ ಅಧಿಕಾರಿಗಳು ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲಿದ್ದಾರೆ ಎಂದರು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಹೆಸರುಗಳನ್ನು ವರ್ಗಾವಣೆ ಬಯಸುವವರು ನಮೂನೆ 8ಎ ರಲ್ಲಿ ಅರ್ಜಿ ಸಲ್ಲಿಸಿ ವರ್ಗಾವಣೆ ಪಡೆಯಬಹುದು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಪೆದ್ದಪ್ಪಯ್ಯ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT