ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಹೆಸರು:`ಆಧಾರ್'ಗೆ ಕೊಕ್?

Last Updated 8 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ತುಮಕೂರು: ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಆಧಾರ್ ಕಾರ್ಡನ್ನು ದಾಖಲೆಯಾಗಿ ಪರಿಗಣಿಸುತ್ತಿಲ್ಲ ಎಂಬ ಅಂಶ ಇದೀಗ ಹೊಸ ಮತದಾರರನ್ನು ಕಂಗೆಡಿಸಿದೆ.

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಫಾರ್ಮ್ ನಂ 6ರ ಜತೆ ವಿಳಾಸದ ದಾಖಲೆಯಾಗಿ ಅನೇಕ ಮತದಾರರಿಂದ ಆಧಾರ್ ಕಾರ್ಡ್ ಪಡೆಯಲಾಗಿದೆ. ಆದರೆ ಈಗ ಚುನಾವಣಾ ಅಧಿಕಾರಿಗಳು ಆಧಾರ್ ಕಾರ್ಡ್ ದಾಖಲೆಯಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ತಿಳಿಸಿರುವುದು ಗೊಂದಲಕ್ಕೆ ಕಾರಣವಾಗಿದೆ.

ಈಗಾಗಲೇ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಆಧಾರ್ ಕಾರ್ಡ್ ನೀಡಿರುವ ಮತದಾರರ ಅರ್ಜಿ ಅನೂರ್ಜಿತಗೊಳ್ಳಲಿದೆ ಎಂದು ತಿಳಿದುಬಂದಿದೆ.

ಆಧಾರ್‌ಗೆ ಮಾನ್ಯತೆ: ಆಧಾರ್ ಕಾರ್ಡ್ ಪರಿಗಣಿಸುವಂತೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆ ರೀತಿ ದೂರುಗಳು ಇದ್ದರೆ ಸ್ಪಂದಿಸಲಾಗುವುದು. ಆಧಾರ್ ಕಾರ್ಡ್ ಗಣನೆಗೆ ತೆಗೆದುಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ತುಮಕೂರು ಜಿಲ್ಲಾಧಿಕಾರಿಗೆ ಸೂಚಿಸಲಾಗುವುದು.
- ಅನಿಲ್‌ಕುಮಾರ್ ಝಾ, ಮುಖ್ಯ ಚುನಾವಣಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT