ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ 13 ಮಂದಿಗೆ ದೃಷ್ಟಿ ನಷ್ಟ

Last Updated 16 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ರಾಯಪುರ (ಐಎಎನ್‌ಎಸ್): ಛತ್ತೀಸ್‌ಗಢದಲ್ಲಿ  ಕಳೆದ ತಿಂಗಳು ಸರ್ಕಾರಿ ಆರೋಗ್ಯ ಶಿಬಿರದಲ್ಲಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಒಳಗಾದವರಲ್ಲಿ ಇನ್ನೂ 13 ಮಂದಿ ದೃಷ್ಟಿ ಕಳೆದುಕೊಂಡಿದ್ದಾರೆ. ಇದರೊಂದಿಗೆ ದೃಷ್ಟಿ ಕಳೆದುಕೊಂಡವರ ಸಂಖ್ಯೆ 24ಕ್ಕೆ ಏರಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

`ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಒಳಗಾದವರಲ್ಲಿ ಹೆಚ್ಚು ಮಂದಿಗೆ ಊತ ಮತ್ತು ಕಣ್ಣಿನಲ್ಲಿ ಕೀವು ಕಾಣಿಸಿಕೊಂಡಿದೆ ಎಂದು ವರದಿಗಳು ಬರುತ್ತಿವೆ. 

ಜಿಲ್ಲಾಡಳಿತ ಅವರನ್ನು ಸಂಪರ್ಕಿಸಿ ಚಿಕಿತ್ಸೆ ನೀಡಲು ಪ್ರಯತ್ನ ನಡೆಸಿದೆ~ ಎಂದು ಅಲ್ಲಿ ನಿಯೋಜಿಸಲಾದ ವೈದ್ಯರೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಗುರುವಾರ 11 ಮಂದಿ ಹಿರಿಯರು ಇದೇ ಶಿಬಿರದಲ್ಲಿ ಶಸ್ತ್ರ ಚಿಕಿತ್ಸೆ ನಂತರ ದೃಷ್ಟಿ ಕಳೆದುಕೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT