ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ 4 ದಿನಗಳ ಸಿಬಿಐ ವಶಕ್ಕೆ ರಾಜಾ

Last Updated 10 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಗರಣಕ್ಕೆ ಸಂಬಂಧಿಸಿದಂತೆ ಸಮಗ್ರ ವಿಚಾರಣೆಗಾಗಿ ಮಾಜಿ ದೂರಸಂಪರ್ಕ ಸಚಿವ ಎ. ರಾಜಾ ಮತ್ತು ಸ್ವಾನ್ ಟೆಲಿಕಾಂನ  ಶಾಹಿದ್ ಉಸ್ಮಾನ್ ಬಲ್ವಾ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯವು ಇನ್ನೂ ನಾಲ್ಕು ದಿನಗಳವರೆಗೆ (14ರವರೆಗೆ) ಸಿಬಿಐ ವಶಕ್ಕೆ ಒಪ್ಪಿಸಿದೆ.

‘ಪ್ರಕರಣದ ಗಂಭೀರ ಸ್ವರೂಪ ಮತ್ತು ವಾಸ್ತವಾಂಶಗಳನ್ನು ಪರಿಗಣಿಸಿ ಮತ್ತಷ್ಟು ದಾಖಲೆಗಳನ್ನು ವಶಪಡಿಸಿಕೊಳ್ಳಬೇಕಿರುವುದರಿಂದ,ಆರೋಪಿಗಳ ಪರಸ್ಪರ ಮುಖಾಮುಖಿ ಮತ್ತು ವಿಚಾರಣೆ ಅಗತ್ಯವಿರುವುದರಿಂದ ಈ ಇಬ್ಬರನ್ನು ನಾಲ್ಕು ದಿನಗಳ ಪೊಲೀಸ್ ವಶಕ್ಕೆ ಒಪ್ಪಿಸಬೇಕೆಂಬ ಮನವಿಯನ್ನು ಪುರಸ್ಕರಿಸಲಾಗಿದೆ’ ಎಂದು ವಿಶೇಷ ನ್ಯಾಯಾಧೀಶರಾದ ಒ.ಪಿ. ಸೈನಿ ಹೇಳಿದ್ದಾರೆ. ರಾಜಾ ಅವರನ್ನು ಫೆ. 2ರಂದು ಬಂಧಿಸಿ ಐದು ದಿನಗಳವರೆಗೆ ಸಿಬಿಐ ವಶಕ್ಕೆ ಒಪ್ಪಿಸಲಾಗಿತ್ತು. ವಿಚಾರಣೆ ವೇಳೆ ಸಹಕರಿಸದ ಕಾರಣ ಫೆ. 8ರಂದು ಮತ್ತೆ ಎರಡು ದಿನಗಳ ಸಿಬಿಐ ವಶಕ್ಕೆ ಒಪ್ಪಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT