ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ ಕುಸಿದ ಸೂಚ್ಯಂಕ

Last Updated 26 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಜಾಗತಿಕ ಆರ್ಥಿಕ ಅಸ್ಥಿರತೆ ಮತ್ತು ತೀವ್ರಗೊಂಡಿರುವ ಯೂರೋಪ್  ಸಾಲದ ಬಿಕ್ಕಟ್ಟಿನಿಂದ ಹೂಡಿಕೆದಾರರು ಆತ್ಮವಿಶ್ವಾಸ ಕಳೆದುಕೊಂಡಿದ್ದು, ಸೋಮವಾರವೂ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 111 ಅಂಶಗಳಷ್ಟು ಇಳಿಕೆ ಕಂಡಿದೆ.

ಕಳೆದ ನಾಲ್ಕು ವಹಿವಾಟು ದಿನಗಳಲ್ಲಿ ಸೂಚ್ಯಂಕ ಇಳಿಯುತ್ತಲೇ ಇದ್ದು, ಸೋಮವಾರದ ಅಂತ್ಯಕ್ಕೆ  ಆಗಸ್ಟ್ 26ರ ಮಟ್ಟವಾದ 16,051 ಅಂಶಗಳಿಗೆ ತಲುಪಿದೆ.  ತೈಲ ಶುದ್ಧೀಕರಣ ಮತ್ತು ಮೂಲಸೌಕರ್ಯ ಕ್ಷೇತ್ರಗಳಿಗೆ  ಸಂಬಂಧಿಸಿದ ಷೇರುಗಳ ಮಾರಾಟ ಒತ್ತಡ ಹೆಚ್ಚಿದೆ.

ಈ ಹಿನ್ನೆಲೆಯಲ್ಲಿ ಸೋಮವಾರದ ವಹಿವಾಟಿನ ಒಂದು ಹಂತದಲ್ಲಿ ಸೂಚ್ಯಂಕವು 16 ಸಾವಿರದ ಗಡಿಗಿಂತ ಕೆಳಗೆ ಇಳಿದಿತ್ತು. ಕಳೆದ ನಾಲ್ಕು ವಹಿವಾಟು ದಿನಗಳಲ್ಲಿ `ಆರ್‌ಐಎಲ್~ ಷೇರುಗಳು ಶೇ 10.83ರಷ್ಟು ಹಾನಿಗೊಳಗಾಗಿವೆ.

ರಾಷ್ಟ್ರೀಯ ಷೇರು ಸೂಚ್ಯಂಕ `ನಿಫ್ಟಿ~ ಕೂಡ ದಿನದ ವಹಿವಾಟಿನಲ್ಲಿ 32 ಅಂಶಗಳನ್ನು ಕಳೆದುಕೊಂಡು 4,835 ಅಂಶಗಳಿಗೆ ವಹಿವಾಟು ಕೊನೆಗೊಳಿಸಿತು. ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿರುವುದರ ಜತೆಗೆ, ವಿದೇಶಿ ಸಾಂಸ್ಥಿಕ ಹೂಡಿಕೆದಾರರ ಚಟುವಟಿಕೆಗಳೂ ಹೆಚ್ಚಿದ್ದು, ಕಳೆದ ಎರಡು ವಹಿವಾಟು ಅವಧಿಗಳಲ್ಲಿ ಒಟ್ಟು ್ಙ 2,500 ಕೋಟಿಗಳಷ್ಟು ಮೌಲ್ಯದ ಷೇರುಗಳನ್ನು ವಿದೇಶಿ ವಿತ್ತೀಯ ಸಂಸ್ಥೆಗಳು ಮಾರಾಟ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT