ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯ ಮಾರಾಟ ನಿಲ್ಲಿಸಲು ಆಗ್ರಹ

Last Updated 23 ಸೆಪ್ಟೆಂಬರ್ 2011, 4:50 IST
ಅಕ್ಷರ ಗಾತ್ರ

ಬ್ಯಾಡಗಿ: ತಾಲ್ಲೂಕಿನ ಮಲ್ಲೂರು ಹಾಗೂ ಶಂಕ್ರಿಪುರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣ ವಾಗಿ ನಿಷೇಧಿಸಿ   ಪಾನಮುಕ್ತ ಗ್ರಾಮವನ್ನಾಗಿ ಪರಿವರ್ತಿಸುವಂತೆ ಆಗ್ರಹಿಸಿ ನೂರಾರು ಮಹಿಳೆಯರು ಗುರುವಾರ ಮಲ್ಲೂರು ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. 

 ಎರಡೂ ಗ್ರಾಮಗಳ ಮಹಿಳೆಯರು ಸಾಮಾಜಿಕ ಕಾರ್ಯಕರ್ತೆ ವನಿತಾ ಗುತ್ತಲ ಅವರ ನೇತೃತ್ವದಲ್ಲಿ  ಮೆರವಣೆಗೆ ನಡೆಸಿ ಅಕ್ರಮ ಮದ್ಯ ಮಾರಾಟವನ್ನು ತಡೆಯಲು ವಿಫಲ ರಾಗಿರುವ ಅಬಕಾರಿ ಅಧಿಕಾರಿಯನ್ನು ಅಮಾನತ್ತು ಗೊಳಿಸುವಂತೆ ಒತ್ತಾಯಿ ಸಿದರು. 
 
ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಕ್ರಮ ಮದ್ಯ ಮಾರಾಟದಿಂದ ಸಾವಿರಾರು ಬಡ ಕುಟುಂಬಗಳು ಬೀದಿಗೆ ಬಂದಿವೆ. ಕುಡಿಯುವವರ ಸಂಖ್ಯೆ ಹೆಚ್ಚಾಗಿದ್ದು, ಹೆಚ್ಚಿನ ಪ್ರಮಾಣ ದಲ್ಲಿ ಯುವಕರೇ ಈ ಚಟಕ್ಕೆ ಬಲಿಯಾಗುತ್ತಿದ್ದಾರೆ.

ಬಾರ್ ಮಾಲೀಕ ರೊಂದಿಗೆ ಶಾಮೀಲಾಗಿರುವ ಅಬಕಾರಿ ಅಧಿಕಾರಿಗಳು ಗ್ರಾಮದ ಗೂಡಂಗಡಿ ಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ದರು.

ಅಕ್ರಮ ಮದ್ಯ ಮಾರಾಟವನ್ನು ತಡೆ ಗಟ್ಟಲು ಕಠಿಣ ಕ್ರಮಗಳನ್ನು ತೆಗೆದು ಕೊಳ್ಳುವಲ್ಲಿ ಸ್ಥಳೀಯ ಶಾಸಕರು ವಿಫಲ ವಾದಲ್ಲಿ ಮುಂದಿನ ದಿನಗಳಲ್ಲಿ ಅವರ ಮನೆ ಎದುರಿಗೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದರು. 
 
ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಾಂತಮ್ಮ ಜಾಧವ, ಸಾವಿತ್ರಾ ಕಮ್ಮಾರ, ನಾಗವೇಣಿ ಸಾಳುಂಕೆ, ಶಾರದಾ ಡಿಸ್ಲೆ, ರತ್ನವ್ವ ಚಲವಾದಿ, ಲತಾ ಸಂಕಣ್ಣನವರ, ಪ್ರೇಮಾ ಕೋಟಿ, ಸಾವಿತ್ರಾ ಬಡಿಗೇರ, ಅಕ್ಕಮ್ಮ ಶಿವಣ್ಣನವರ ಮತ್ತಿತರರು ಪಾಲ್ಗೊಂಡಿದ್ದರು.

ತಹಶೀಲ್ದಾರರ ಪರವಾಗಿ  ಕಂದಾಯ ನಿರೀಕ್ಷಕ ಭೋಗಾರ ಅವರು ಮನವಿ  ಸ್ವೀಕರಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT