ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನರಂಜನಾ ಸ್ಥಳಗಳಿಗೆ ಹೊಸ ಮಾರ್ಗಸೂಚಿ

Last Updated 20 ಸೆಪ್ಟೆಂಬರ್ 2013, 20:02 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕ ಮನರಂಜನಾ ಸ್ಥಳಗಳು ಮತ್ತು ಕೆಲವು ಕ್ರೀಡಾ ಸ್ಥಳಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸುವುದು ಸೇರಿದಂತೆ ವಿವಿಧ ನಿಯಮಗಳನ್ನು ಒಳಗೊಂಡ ಹೊಸ ಮಾರ್ಗಸೂಚಿಯನ್ನು ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸ್ಥಳಗಳಲ್ಲಿ ಜೂಜು, ಸ್ಕಿಲ್‌ ಗೇಮ್‌ನಂತಹ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದ್ದ ಬಗ್ಗೆ ಸಾಕಷ್ಟು ದೂರು ಕೇಳಿಬಂದಿದ್ದರಿಂದ ಸರ್ಕಾರ ಹೊಸ ಮಾರ್ಗಸೂಚಿ ರೂಪಿಸಿ ತಕ್ಷಣದಿಂದಲೇ ಜಾರಿಗೆ ತರುವಂತೆ ಆದೇಶಿಸಿದೆ.

ಸಾರ್ವಜನಿಕ ಮನರಂಜನಾ ಸ್ಥಳಗಳಿಗೆ ಆಯಾ ಪ್ರದೇಶದ ಪರವಾನಗಿ ಪ್ರಾಧಿಕಾರದಿಂದ ಪರವಾನಗಿ ಪಡೆಯುವುದು ಕಡ್ಡಾಯ. ಪೊಲೀಸ್ ಕಮಿಷನರೇಟ್ ವ್ಯಾಪ್ತಿಗೆ ಬರುವ ಸ್ಥಳಗಳಲ್ಲಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮಿಷನರ್ ಅವರನ್ನು ಒಳಗೊಂಡ ಪರವಾನಗಿ ಪ್ರಾಧಿಕಾರ ಪರವಾನಗಿ ನೀಡುವ ಅಧಿಕಾರವನ್ನು ಹೊಂದಿರುತ್ತದೆ. ಕಮಿಷನರೇಟ್ ವ್ಯಾಪ್ತಿಗೆ ಬರದ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿಯೊಬ್ಬರೇ ಪರವಾನಗಿ ಪ್ರಾಧಿಕಾರ ಆಗಿರುತ್ತಾರೆ.

ಪರವಾನಗಿ ನೀಡುವ ಅಥವಾ ನಿರಾಕರಿಸುವಾಗ ಸಾರ್ವಜನಿಕ ಹಿತಾಸಕ್ತಿ, ಅರ್ಜಿದಾರನ ಹಿನ್ನೆಲೆ, ಸಂಬಂಧಿಸಿದ ಸ್ಥಳದಲ್ಲಿ ವಾಹನ ನಿಲುಗಡೆಗೆ ಇರುವ ಸ್ಥಳಾವಕಾಶ, ಕಾನೂನು ಮತ್ತು ಸುವ್ಯವಸ್ಥೆ ಮೇಲೆ ಆಗಬಹುದಾದ ಪರಿಣಾಮ ಮತ್ತಿತರ ಅಂಶಗಳನ್ನು ಪರಿಗಣಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT