ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಗೆಲಸಗಾರರ ಮಂಡಳಿ ಸ್ಥಾಪಿಸಲು ಆಗ್ರಹ

Last Updated 1 ಜೂನ್ 2011, 10:25 IST
ಅಕ್ಷರ ಗಾತ್ರ

ಚಿತ್ರದುರ್ಗ: ಮನೆಗೆಲಸ ನಿರ್ವಹಿಸುವ ಮಹಿಳೆಯರ ಭದ್ರತೆ ಮತ್ತು ರಕ್ಷಣೆಗಾಗಿ `ಮನೆಗೆಲಸಗಾರರ ಮಹಿಳಾ ಮಂಡಳಿ~ ಸ್ಥಾಪಿಸಬೇಕು ಎಂದು ಶಾಸಕಎಸ್.ಕೆ. ಬಸವರಾಜನ್ ಆಗ್ರಹಿಸಿದರು.
ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ನಗರದ ಗುರುಭವನದಲ್ಲಿ ಆಯೋಜಿಸಿದ್ದ ಕಾರ್ಮಿಕರದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಸಂಘಟಿತ ವಲಯದಲ್ಲಿ ಇರುವ ಕಾರ್ಮಿಕರಿಗೆ ಸೌಲಭ್ಯಗಳು ಸಿಗುವಂತೆ  ಮನೆಗೆಲಸ ನಿರ್ವಹಿಸುವವರಿಗೆ ಸೂಕ್ತ ಸೌಕರ್ಯ ಕಲ್ಪಿಸಬೇಕು. ಈ ಮೂಲಕ ಸಾಮಾಜಿಕ ಭದ್ರತೆ ಒದಗಿಸಬೇಕು. ಆದ್ದರಿಂದ, ಸರ್ಕಾರ  ಮನೆಗೆಲಸಗಾರರ ಮಹಿಳಾ ಮಂಡಳಿ ಸ್ಥಾಪಿಸಬೇಕು ಎಂದು ಅಭಿಪ್ರಾಯಪಟ್ಟರು.

ಮನೆಗೆಲಸ ನಿರ್ವಹಿಸುವ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ನೀಡಿದ ಪ್ರಕರಣಗಳು ಪದೇ ಪದೇ ನಡೆಯುತ್ತಿವೆ. ಆದರೆ, ಶೋಷಣೆಗೊಳಗಾದ ಮಹಿಳೆಯರು ಹೊಟ್ಟೆಪಾಡಿಗಾಗಿ ಎಲ್ಲವನ್ನು ಸಹಿಸಿಕೊಂಡು ಸುಮ್ಮನಿರುವ ಪರಿಸ್ಥಿತಿಯಿದೆ. ಇವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಕಟ್ಟಡ ಕಾರ್ಮಿಕರು ಐಷಾರಾಮಿ ಮನೆಗಳನ್ನು ನಿರ್ಮಿಸುತ್ತಾರೆ. ಆದರೆ, ಕಟ್ಟಡ ನಿರ್ಮಿಸುವ ಕಾರ್ಮಿಕರು ಮತ್ತು ಅವರ ಕುಟುಂಬಗಳು ಸೂರಿಲ್ಲದೆ ಶೆಡ್‌ಗಳಲ್ಲಿ ವಾಸಿಸುವ ಶೋಚನೀಯ ಸ್ಥಿತಿಯಿದೆ. ಇದಕ್ಕೆ ಸಂಘಟನೆಯ ಕೊರತೆಯೇ ಮುಖ್ಯ ಕಾರಣವಾಗಿದೆ. ಸರ್ಕಾರ ಕಾರ್ಮಿಕರಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದರೂ ಸದುಪಯೋಗವಾಗುತ್ತಿಲ್ಲ ಎಂದರು.

ರಾಜ್ಯಾದ್ಯಂತ 1.35 ಲಕ್ಷ ಕಟ್ಟಡ ಕಾರ್ಮಿಕರಿದ್ದು, ಜಿಲ್ಲೆಯಲ್ಲಿರುವ ಸುಮಾರು 25 ಸಾವಿರ ಜನ ಕಟ್ಟಡ ಕಾರ್ಮಿಕರಲ್ಲಿ ಕೇವಲ 3 ಸಾವಿರ ಜನರು ಸದಸ್ಯತ್ವ ಪಡೆದಿದ್ದಾರೆ. ಕಾರ್ಮಿಕರ ಇಲಾಖೆಯಲ್ಲಿ ಸದಸ್ಯತ್ವ ಪಡೆಯದಿದ್ದಲ್ಲಿ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆ. ಆದ್ದರಿಂದ, ಎಲ್ಲ ಕಾರ್ಮಿಕರು ್ಙ 25 ಶುಲ್ಕ ನೀಡಿ ಸದಸ್ಯತ್ವ ಪಡೆದು, ಒಂದು ತಿಂಗಳಿಗ್ಙೆ 10 ಶುಲ್ಕ ಭರಿಸಿದರೆ ಮಾತ್ರ ಅಪಘಾತ ಸಂದರ್ಭದಲ್ಲಿ ಪರಿಹಾರ ಪಡೆಯಬಹುದು ಎಂದು ನುಡಿದರು.

ಚಿತ್ರದುರ್ಗ ಕ್ಷೇತ್ರದ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಸೂರಿಲ್ಲದ ಕಟ್ಟಡ ಕಾರ್ಮಿಕರಿಗೆ ಮನೆ ಅಥವಾ ನಿವೇಶನ ನೀಡುವುದಾಗಿ ಭರವಸೆ ನೀಡಿದರು. ಕಟ್ಟಡ ಕಾರ್ಮಿಕರ ಜಿಲ್ಲಾ ಘಟಕದ ಕಾರ್ಯದರ್ಶಿ ಗಣೇಶ್ ಮಾತನಾಡಿ, ನಗರದಲ್ಲಿ ಕಟ್ಟಡ ಕಾರ್ಮಿಕರ ಕಚೇರಿ ತೆರೆಯಲು ನಿವೇಶನ ನೀಡಬೇಕು ಹಾಗೂ ಕಚೇರಿ ನಿರ್ಮಾಣಕ್ಕೆ ಸಂಸದರ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.

ರಾಜ್ಯ ಕಟ್ಟಡ ಕಾರ್ಮಿಕರ ಯೂನಿಯನ್ ಅಧ್ಯಕ್ಷ ಎನ್.ಪಿ. ಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ವೈ. ಸತ್ಯಪ್ಪ ಅಧ್ಯಕ್ಷತೆ ವಹಿಸಿದ್ದರು. ಸಂಸದ ಜನಾರ್ದನಸ್ವಾಮಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಸಿಇಓ ವಸಂತಕುಮಾರ್ ಇಟ್ಟಣಗಿ, ರಾಜ್ಯ ಘಟಕದ ಉಪಾಧ್ಯಕ್ಷ ಜಿ. ಅಂಕಯ್ಯ, ಪ್ರಧಾನ ಕಾರ್ಯದರ್ಶಿ ಪಳನಿಕುಮಾರ್, ಸಂಘಟನಾ ಕಾರ್ಯದರ್ಶಿ ಡಿ. ಧನಶೇಖರ್, ಎನ್‌ಸಿಎಲ್ ದಕ್ಷಿಣ ಭಾರತ ಸಂಚಾಲಕ ಜೀವಾನಂದ್ ಇತರರು ಹಾಜರಿದ್ದರು. ಕಾರ್ಯಕ್ರಮಕ್ಕೂ ಮುನ್ನ ಕಟ್ಟಡ ಕಾರ್ಮಿಕರು ನಗರದ ಮುಖ್ಯರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT