ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರದಡಿ ಎಂ.ಕಾಂ. ತರಗತಿ!

Last Updated 23 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಕೋಲಾರ:  ನಗರದಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಕೊಠಡಿಗಳ ಕೊರತೆಯ ಪರಿಣಾಮವಾಗಿ ಮರದ ಕೆಳಗೆ ತರಗತಿಗಳನ್ನು ನಡೆಸಲಾಗುತ್ತಿದೆ.

ತಾಲ್ಲೂಕಿನ ಮಂಗಸಂದ್ರದ ಸಮೀಪ ನಿರ್ಮಾಣವಾಗುತ್ತಿರುವ ಕೇಂದ್ರದ ಹೊಸ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ವಿದ್ಯಾರ್ಥಿಗಳು ಗುರುವಾರವಷ್ಟೇ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಶುಕ್ರವಾರದಿಂದ ಮರದ ಕೆಳಗೆ ಕುಳಿತು ಪಾಠ ಕೇಳುತ್ತಿದ್ದಾರೆ.

ಬಾಲಕರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡದಲ್ಲಿ 15 ವರ್ಷದಿಂದ ಸ್ನಾತಕೋತ್ತರ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಕಾಲೇಜಿನಲ್ಲಿ ಮೂರು ಹೊಸ ಸ್ನಾತಕೋತ್ತರ ವಿಭಾಗಗಳೂ ಕಾರ್ಯ ನಿರ್ವಹಿಸುತ್ತಿರುವುದರಿಂದ ತರಗತಿ ನಡೆಸಲು ಜಾಗ ಸಾಕಾಗುತ್ತಿಲ್ಲ. ಹೀಗಾಗಿ ಕೂಡಲೇ ಕಟ್ಟಡವನ್ನು ಬಿಟ್ಟುಕೊಡಬೇಕು ಎಂದು ಕಾಲೇಜು ಮುಖ್ಯಸ್ಥರು ಕೇಂದ್ರದ ಮುಖ್ಯಸ್ಥರನ್ನು ಕೋರಿದ್ದಾರೆ.

`ಇಂಥ ಸಂದರ್ಭದಲ್ಲಿ ತರಗತಿಗಳನ್ನು ಮರದ ಕೆಳಗೆ ನಡೆಸುತ್ತಿದ್ದೇವೆ. ಅಷ್ಟೆ ಅಲ್ಲದೆ, ಈಗಿನ ಕೇಂದ್ರದಲ್ಲಿ ಮೂಲ ಸೌಕರ್ಯಗಳೂ ಇಲ್ಲ~ ಎಂದು ಸಿಬ್ಬಂದಿಯೊಬ್ಬರು    ದೂರಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT