ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಳು ಮುಷ್ಕರ 4ನೇ ದಿನಕ್ಕೆ

Last Updated 29 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸಮಗ್ರ ಮರಳು ನೀತಿ ರೂಪಿಸುವಂತೆ ಒತ್ತಾಯಿಸಿ ಮರಳು ಸಾಗಣೆದಾರರ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು ಶನಿವಾರ ರಾಜ್ಯದ ಸುಮಾರು 50 ಸಾವಿರ ಲಾರಿಗಳು ಸಂಚಾರ ಸ್ಥಗಿತಗೊಳಿಸಿದವು.
ಮುಷ್ಕರದಿಂದ ಮರಳಿನ ದರ ದುಪ್ಪಟ್ಟಾಗಿದ್ದು ನಿರ್ಮಾಣ ಕಾರ್ಯಗಳಿಗೆ ಅಡಚಣೆ ಉಂಟಾಗಿದೆ.

ಖಾಸಗಿ ಕಟ್ಟಡಗಳ ನಿರ್ಮಾಣ ಮಾತ್ರವಲ್ಲದೆ ಸಾರ್ವಜನಿಕ ನಿರ್ಮಾಣ ಕಾರ್ಯಗಳ ಮೇಲೂ ಮುಷ್ಕರ ಪ್ರತಿಕೂಲ ಪರಿಣಾಮ ಬೀರಿದೆ. ಮರಳು ಕಾರ್ಮಿಕರು, ಕಟ್ಟಡ ಕಾರ್ಮಿಕರು ಮೂರು ದಿನಗಳಿಂದ ಕೆಲಸವಿಲ್ಲದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಇದೇ ವೇಳೆ `ಸರ್ಕಾರ ಶನಿವಾರವೂ ಮಾತುಕತೆಗೆ ಮುಂದಾಗಿಲ್ಲ. ಮರಳು ಸಾಗಣೆದಾರರು ಹಾಗೂ ಸಾರ್ವಜನಿಕರ ನೆರವಿಗೆ ಬಾರದೆ ಆಡಳಿತ ನಡೆಸುವವರು ಕಣ್ಮುಚ್ಚಿ ಕುಳಿತಿದ್ದಾರೆ. ಸರ್ಕಾರ ಮಾತುಕತೆಗೆ ಮುಂದಾಗುವವರೆಗೂ ಮುಷ್ಕರ ಹಿಂತೆಗೆದುಕೊಳ್ಳುವುದಿಲ್ಲ~ ಎಂದು ರಾಜ್ಯದ ಲಾರಿ ಮಾಲೀಕರು ಮತ್ತು ಏಜೆಂಟರುಗಳ ಒಕ್ಕೂಟ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT