ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರೆಯಾಗುತ್ತಿರುವ ಅವಿಭಕ್ತ ಕುಟುಂಬ: ಚೇಗರೆಡ್ಡಿ ವಿಷಾದ

Last Updated 2 ಅಕ್ಟೋಬರ್ 2012, 5:55 IST
ಅಕ್ಷರ ಗಾತ್ರ

ಬಾಗಲಕೋಟೆ: ಅವಿಭಕ್ತ ಕುಟುಂಬಗಳು ಕಣ್ಮರೆಯಾಗುತ್ತಿರುವುದು ಸಮಾಜದ ಏಳಿಗೆಗೆ ಮಾರಕ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ ಚೇಗರೆಡ್ಡಿ ವಿಷಾದ ವ್ಯಕ್ತಪಡಿಸಿದರು. 

 ನಗರದ ಜಿಮ್‌ಖಾನ್ ಕ್ಲಬ್ ಸಭಾಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ  ಸೋಮವಾರ ಏರ್ಪಡಿಸಿದ್ದ ಹಿರಿಯ ನಾಗರಿಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಿವೃತ್ತ ವೈದ್ಯಾಧಿಕಾರಿ ಡಾ.ಎಚ್.ಎಫ್. ಯೋಗಪ್ಪನವರ ಮಾತನಾಡಿ, ಮನುಷ್ಯನ ಪ್ರಾಕೃತಿಕ ಆಯಸ್ಸು 140 ವರ್ಷ. 2012ರಲ್ಲಿ ಮನುಷ್ಯನ ನಿರೀಕ್ಷಿತ ಜೀವಿತಾವಧಿ 64 ವರ್ಷ ಎಂದರು.ಡಾ. ಸಂಗಮೇಶ ಕಲ್ಹಾಳ ಉಪನ್ಯಾಸ ನೀಡಿದರು. ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಎಸ್.ಎನ್.ಗೋಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಸ್.ಎಚ್.ಪಾಟೀಲ, ರಮೇಶ ತಳವಾರ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT