ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲಾಲಾ ತಂದೆಗೆ ಬ್ರಿಟನ್‌ನಲ್ಲಿ ಉದ್ಯೋಗ

Last Updated 3 ಜನವರಿ 2013, 19:59 IST
ಅಕ್ಷರ ಗಾತ್ರ

ಲಂಡನ್(ಪಿಟಿಐ): ಹದಿಹರೆಯದ ಮುಸ್ಲಿಂ ಯುವತಿಯರ ಶೈಕ್ಷಣಿಕ ಹಕ್ಕುಗಳಿಗಾಗಿ ಹೋರಾಡುತ್ತಿರುವ ಪಾಕಿಸ್ತಾನ ಯುವತಿ ಮಲಾಲಾ ತಂದೆಗೆ ಬ್ರಿಟನ್ ಸರ್ಕಾರ ರಾಯಭಾರ ಕಚೇರಿಯಲ್ಲಿ ಉದ್ಯೋಗ ನೀಡಿರುವುದಾಗಿ ಡೈಲಿ ಮೇಲ್ ಪತ್ರಿಕೆ ವರದಿ ಮಾಡಿದೆ.

ಮಲಾಲಾ ತಂದೆ ಜೈವುದ್ದೀನ್ ಯೂಸಫ್‌ಝಾಯ್ ಅವರನ್ನು ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯಲ್ಲಿ ಪಾಕಿಸ್ತಾನ ಶೈಕ್ಷಣಿಕ ಸಲಹೆಗಾರರನ್ನಾಗಿ ನೇಮಿಸಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಉಗ್ರರ ಗುಂಡಿನ ದಾಳಿಗೆ ಒಳಗಾಗಿರುವ ಮಲಾಲಾಗೆ ಇಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆ ಚಿಕಿತ್ಸೆ ಪೂರ್ಣಗೊಳ್ಳುವವರೆಗೂ ಅವರ ತಂದೆ ಈ ಉದ್ಯೋಗದಲ್ಲಿ ಮುಂದುವರಿಯಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT