ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ ತಂದ ಪರದಾಟ

Last Updated 1 ಅಕ್ಟೋಬರ್ 2011, 20:00 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಹಲವೆಡೆ ಶನಿವಾರ ಭಾರಿ ಮಳೆಯಾಗಿದ್ದು, ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಜನ ತೀವ್ರ ತೊಂದರೆ ಅನುಭವಿಸಿದರು.

ನಗರದಲ್ಲಿ ಗರಿಷ್ಠ 19 ಮಿ.ಮೀ. ಮಳೆಯಾಗಿದ್ದು, ವಿಮಾನ ನಿಲ್ದಾಣದಲ್ಲಿ 1.0 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ನಗರದ ವಿವಿಧ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಕಬ್ಬನ್ ಉದ್ಯಾನ ರಸ್ತೆ, ಬಸವೇಶ್ವರ ವೃತ್ತ, ಟ್ರಿನಿಟಿ ವೃತ್ತ, ಫ್ರೇಜರ್ ಟೌನ್  ಸೇರಿದಂತೆ ಹಲವೆಡೆ ಮಳೆ ನೀರು ನಿಂತಿದ್ದರಿಂದ ಸಂಚಾರಕ್ಕೆ ಅಡ್ಡಿಯಾಯಿತು. ಇದರಿಂದ ಕೆಲ ಕಾಲ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು.

ಜೀವನಹಳ್ಳಿಯ ಮೇಲು ಸೇತುವೆಯ ಕೆಳಭಾಗದಲ್ಲಿ ನೀರು ನಿಂತ ಪರಿಣಾಮ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಯಿತು. ಆನಂತರ ಪಾಲಿಕೆ ಮತ್ತು ಜಲಮಂಡಳಿಯ ಎಂಜಿನಿಯರ್‌ಗಳು ಕಾರ್ಯಾಚರಣೆ ನಡೆಸಿ ಸಂಚಾರ ಸುಗಮಗೊಳಿಸಿದರು.

ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಜನ ತೀವ್ರ  ತೊಂದರೆ ಅನುಭವಿಸುವಂತಾಯಿತು. ಉಳಿದಂತೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT