ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಯಿಂದ ಕಾರ್ಯಾಚರಣೆಗೆ ಅಡ್ಡಿ

Last Updated 7 ಜುಲೈ 2013, 10:38 IST
ಅಕ್ಷರ ಗಾತ್ರ

ಡೆಹ್ರಾಡೂನ್ (ಪಿಟಿಐ): ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಹಾಗೂ ಹವಾಮಾನ ವೈಪರಿತ್ಯದಿಂದಾಗಿ ಉತ್ತರಾಖಂಡದ ಮೇಘಸ್ಫೋಟಕ್ಕೆ ತತ್ತರಿಸಿದ ಪ್ರದೇಶಗಳಲ್ಲಿ ನಡೆಸುತ್ತಿರುವ ಪರಿಹಾರ ಕಾರ್ಯಾಚರಣೆಯಲ್ಲಿ ತೊಂದರೆ ಉಂಟಾಗಿದೆ.

ಪ್ರವಾಹಕ್ಕೆ ನಲುಗಿರುವ ರುದ್ರಪ್ರಯಾಗ್, ಉತ್ತರಕಾಶಿ ಮತ್ತು ಚಮೋಲಿ ಜಿಲ್ಲೆಗಳಲ್ಲಿ ಆಹಾರ ಸಾಮಗ್ರಿಗಳನ್ನು ಪೂರೈಸಲು ರಾಜ್ಯ ಸರ್ಕಾರ ಭಾನುವಾರ ಹೆಲಿಕಾಪ್ಟರ್‌ಗಳನ್ನು ಸಜ್ಜುಗೊಳಿಸಿ ನಿಲ್ಲಿಸಿದೆ. ಆದರೆ ಹವಾಮಾನ ವೈಪರಿತ್ಯದಿಂದಾಗಿ ಹೆಲಿಕಾಪ್ಟರ್‌ಗಳು ಹಾರಾಟ ನಡೆಸಲು ಸಾಧ್ಯವಾಗಿಲ್ಲ.

ಈ ಮೂರು ಜಿಲ್ಲೆಗಳಲ್ಲಿ ಪ್ರವಾಹದ ಹೊಡೆತಕ್ಕೆ ಬಲಿಯಾಗಿರುವ ಹಳ್ಳಿಗಳ ಪ್ರಮುಖ ಸಂಚಾರ ಮಾರ್ಗಗಳೆಲ್ಲವೂ ಕೊಚ್ಚಿಕೊಂಡು ಹೋಗಿ ಹಾಳಾಗಿರುವುದರಿಂದ ಲಾರಿಗಳ ಮೂಲಕ ಹಳ್ಳಿಗಳಿಗೆ ಪರಿಹಾರ ಸಾಮಗ್ರಿಗಳನ್ನು ತಲುಪಿಸುವುದು ಜಿಲ್ಲಾಡಳಿತಕ್ಕೆ ಅಸಾಧ್ಯವಾಗಿದೆ.

ಸಧ್ಯ ಆಧಾರಧಾನ್ಯಗಳ ಕೊರತೆ ಎದುರಿಸುತ್ತಿರುವ ಹಳ್ಳಿಗಳಿಗೆ ಆಹಾರ ಸಾಮಗ್ರಿಗಳನ್ನು ಪೂರೈಸಲು ಹವಾಮಾನ ವೈಪರಿತ್ಯದಲ್ಲೂ ಕಾರ್ಯನಿರ್ವಹಿಸುವ ಹೆಲಿಕಾಪ್ಟರ್‌ಗಳನ್ನು ಬಳಕೆಮಾಡುವುದೊಂದೆ ಇದೀಗ ಉಳಿದಿರುವ ಆಯ್ಕೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT