ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಯಿಂದ ತೊಂದರೆ: ದೂರುಗಳ ಪರಿಶೀಲನೆ

Last Updated 2 ಮೇ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದಾದ ತೊಂದರೆಗಳಿಗೆ ಸಂಬಂಧಿಸಿದಂತೆ ಪಾಲಿಕೆಯ ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಗೆ ಬಂದಿರುವ ದೂರುಗಳನ್ನು ಉಪ ಮೇಯರ್ ಎಲ್. ಶ್ರೀನಿವಾಸ್ ಬುಧವಾರ ಪರಿಶೀಲಿಸಿದರು.

ಸೆಂಟ್ರಲ್ ಸಿಲ್ಕ್ ಬೋರ್ಡ್ ಹತ್ತಿರ ಮರದ ಟೊಂಗೆ ಬಿದ್ದಿರುವುದು ಹಾಗೂ ಮಹದೇವಪುರ ವಲಯದ ಕೆಲವು ಪ್ರದೇಶಗಳಲ್ಲಿ ರಸ್ತೆ ಬದಿ ಮೋರಿ ಕಟ್ಟಿಕೊಂಡು ರಸ್ತೆ ಮೇಲೆ ನೀರು ನಿಂತಿರುವ ಕುರಿತು ನಿಯಂತ್ರಣ ಕೊಠಡಿಯಲ್ಲಿ ದಾಖಲಾದ ದೂರುಗಳನ್ನು ಪರಿಶೀಲಿಸಿದ ಅವರು, ಸಾರ್ವಜನಿಕರಿಂದ ದೂರು ಬಂದ ತಕ್ಷಣವೇ ನಿಯಂತ್ರಣ ಕೊಠಡಿಯ ಸಿಬ್ಬಂದಿ ಗ್ಯಾಂಗ್‌ಮೆನ್‌ಗಳನ್ನು ಕಳುಹಿಸಿ ಕ್ರಮ ಕೈಗೊಂಡಿರುವುದನ್ನು ಗಮನಿಸಿದರು.

ಮಂಗಳವಾರ ರಾತ್ರಿ ಸುರಿದ ಮಳೆಯಿಂದ ನಗರದಲ್ಲಿ ಯಾವುದೇ ರೀತಿಯ ಅನಾಹುತಗಳು ಸಂಭವಿಸಿರುವುದಿಲ್ಲ ಎಂದು ಉಪ ಮೇಯರ್ ತಿಳಿಸಿದ್ದಾರೆ.

ಮಳೆಯಿಂದ ಉಂಟಾಗುವ ಸಮಸ್ಯೆಗಳನ್ನು ಬಗೆಹರಿಸಲು ಪಾಲಿಕೆಯ ನಿಯಂತ್ರಣ ಕೊಠಡಿಗಳಲ್ಲಿ ವಾಹನ, ಉಪಕರಣ ಹಾಗೂ ಸಿಬ್ಬಂದಿಯನ್ನು ಸಜ್ಜಾಗಿಡಲಾಗಿದೆ. ಸಾರ್ವಜನಿಕರು ಪಾಲಿಕೆಯ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ: 22660000, 22221188, 22975595 ಸಂಪರ್ಕಿಸಿ ದೂರು ಸಲ್ಲಿಸಬಹುದು ಎಂದು ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT